ಹಾಸನ: ಗುಂಡಿಕ್ಕಿ ಆರ್‌ಎಸ್‌ಎಸ್ ಕಾರ್ಯಕರ್ತನ ಹತ್ಯೆ

ಹಾಸನ : ಮೀನು ಹಿಡಿಯಲು ಹೋಗಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತ ಸೇರಿದಂತೆ ಮೂವರು ಮೇಲೆ ಗುಂಡಿನ ದಾಳಿ ನಡೆದಿದ್ದು, ಓರ್ವ ಸ್ಥಳದಲ್ಲೇ ಓರ್ವರು ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಕಲೇಶಪುರ ತಾಲೂಕಿನ ಯಸಳೂರು ಹೋಬಳಿ ತಂಬಲಗೇರಿ ಗ್ರಾಮದಲ್ಲಿ ನಿನ್ನೆ. ಸೋಮವಾರ ಮಧ್ಯರಾತ್ರಿ ನಡೆದ ಗುಂಡಿನ ದಾಳಿಯಿಂದ ಉಂಟಾಗಿರುವ ಉದ್ವಿಗ್ನ ಸ್ಥಿತಿಯ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ. ತಂಬಲಗೇರಿ ಗ್ರಾಮದ ನವೀನ (೩೯) ಮೃತ ಆರ್ ಎಸ್ ಎಸ್ ಕಾರ್ಯಕರ್ತರಾಗಿದ್ದಾರೆ. ದಯಾನಂದ ಹಾಗೂ ಪದ್ಮನಾಭ ಎಂಬವರು ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡಿದ್ದು, ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನವೀನ, ದಯಾನಂದ, ಪದ್ಮನಾಭ, ರಾಜಾಚಾರಿ ಸೇರಿ ನಾಲ್ವರು ರಾತ್ರಿ ಮೀನು ಹಿಡಿಯಲು ತೆರಳಿದ್ದರು. ಹೇಮಾವತಿ ನದಿಯ ದಡದಲ್ಲಿ ಮೀನು ಹಿಡಿಯಲು ಬೆಂಕಿ ಹಾಕಿಕೊಂಡು ಕುಳಿತಿದ್ದ ವೇಳೆ ನಾಲ್ವರು ಸ್ನೇಹಿತರ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ.
ಗುಂಡು ತಗುಲಿ ನವೀನ ಸ್ಥಳದಲ್ಲೇ ಮೃತಪಟ್ಟರೆ, ದಯಾನಂದ ಹಾಗೂ ಪದ್ಮನಾಭ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಜಾಚಾರಿ ಗುಂಡಿನ ದಾಳಿಯಿಂದ ಪಾರಾಗಿದ್ದಾರೆ. ತನಿಖೆ ತೀವ್ರಗೊಂಡಿದ್ದು, ಸ್ಥಳ ಪರಿಶೀಲನೆಗಾಗಿ ವಿಧಿ ವಿಜ್ಞಾನ ಪ್ರಯೋಗಾಯದ ತಜ್ಞರು ತಯಾರಿ ನಡೆಸಿದ್ದಾರೆ.
ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಎಸ್‌ಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ಐಟಿ ಅಧಿಕಾರಿಗಳ ದಾಳಿ, ಕಲಬುರಗಿ ರೈಲ್ವೆ ನಿಲ್ದಾಣದ ಬಳಿ ಕಾರಿನಲ್ಲಿದ್ದ 2 ಕೋಟಿ ರೂ. ವಶಕ್ಕೆ

4 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement