ಸಂಸದ ಪ್ರತಾತ್‌ ಸಿಂಹ ವಿರುದ್ಧ ಅವಹೇಳನಕಾರಿ ಪೋಸ್ಟ್; ಪೊಲೀಸ್ ಕಾನ್‌ಸ್ಟೇಬಲ್‌ ಅಮಾನತು

ಮೈಸೂರು: ಬಿಜೆಪಿ ಸಂಸದ ಪ್ರತಾಪ ಸಿಂಹ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಕಾರಣಕ್ಕೆ ಪೊಲೀಸ್ ಹೆಡ್‌ ಕಾನ್‌ಸ್ಟೇಬಲ್‌ ಒಬ್ಬರನ್ನು ಪೊಲೀಸ್ ಆಯುಕ್ತ ರಮೇಶ ಬಾನೋತ್ ಅಮಾನತು ಮಾಡಿದ್ದಾರೆ.
ಮೈಸೂರು ನಗರದ ವಿವಿ ಪುರಂ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್‌ ಕಾನ್‌ಸ್ಟೇಬಲ್ ಬಿ.ಪ್ರದೀಪ ಎಂಬವರನ್ನು ಅಮಾನತು ಮಾಡಲಾಗಿದೆ. ಸಾಮಾಜಿಕ ಜಾಲಾತಾಣದಲ್ಲಿ ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಪ್ರದೀಪ ಈಶ್ವರ ಅವರ ವಾಕ್ಸಮರದ ವೀಡಿಯೊಕ್ಕೆ ಹೆಡ್ ಕಾನ್‌ಸ್ಟೇಬಲ್ ಪ್ರಕಾಶ ಕಾಮೆಂಟ್ ಮಾಡಿದ್ದರು. ಅದರಲ್ಲಿ ಸಂಸದರ ವಿರುದ್ಧ ಅವಹೇಳನಕಾರಿ ಹೇಳಿಕೆ ಪೋಸ್ಟ್‌ ಮಾಡಿದ್ದರು ಎನ್ನಲಾಗಿದೆ. ಇದನ್ನು ಗಮನಿಸಿದ ಸಂಸದ ಪ್ರತಾಪ್ ಸಿಂಹ ಕಮೆಂಟ್‌ನ ಸ್ಕ್ರೀನ್‌ಶಾಟ್ ಜೊತೆ ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದರು. ಆ ದೂರಿನ ಅನ್ವಯ ಇಲಾಖಾ ವಿಚಾರಣೆ ಬಾಕಿ ಇರಿಸಿ ಹೆಡ್‌ ಕಾನ್‌ಸ್ಟೇಬಲ್ ಬಿ ಪ್ರದೀಪ ಅವರನ್ನು ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ ಎಂದು ವರದಿಯಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement