ಬೆಂಗಳೂರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ, ಅವರಿಗೆ ಮೊದಲಿನಂತೆ ಕೆಲಸ ಮಾಡಲು ಆಗುತ್ತಿಲ್ಲ, ಹೀಗಾಗಿ ತಮ್ಮ ವಯಸ್ಸಿನ ಇತಿಮಿತಿ, ಆರೋಗ್ಯವನ್ನು ಮನಗಂಡು ಬೇರೆಯವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಮತ್ತೆ ಹೇಳಿದ್ದಾರೆ.
ಬಿಜೆಪಿಯ ಕರ್ನಾಟಕದ ಉಸ್ತುವಾರಿ ಅರುಣ ಸಿಂಗ್ ಅವರ ಜೊತೆ ಒನ್ ಟು ಒನ್ ಸಭೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಮುಖ್ಯಮಂತ್ರಿ ಯಡಿಯೂರಪ್ಪನವರ ಬಗ್ಗೆ ನಮಗೆ ಮೊದಲಿನಂದಲೂ ಗೌರವವಿದೆ, ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ಬಿಜೆಪಿಯಲ್ಲಿ ಸಾಕಷ್ಟುನಾಯಕರಿದ್ದಾರೆ, ಬೇರೆಯವರಿಗೆ ಬೆಳೆಯಲು ಯಡಿಯೂರಪ್ಪನವರು ಅವಕಾಶ ನೀಡಬೇಕು. ರಾಜ್ಯದ ಹಿತದೃಷ್ಟಿಯಿಂದ ಅವರ ಬದಲಾವಣೆ ಮುಖ್ಯ, ಅವರಲ್ಲಿ ಮೊದಲು ಇದ್ದಂತಹ ಶಕ್ತಿ, ಆಡಳಿತವನ್ನು ವೇಗವಾಗಿ ತೆಗೆದುಕೊಂಡು ಹೋಗುವ ಉತ್ಸಾಹ ಕಾಣುತ್ತಿಲ್ಲ. ಬಹುತೇಕ ಶಾಸಕರು, ಸಚಿವರಿಗೆ ಅವರ ನಾಯಕತ್ವದ ಬಗ್ಗೆ ಸಮಾಧಾನವಿಲ್ಲ. ಆದರೆ ಅದನ್ನು ಬಹಿರಂಗವಾಗಿ ಹೇಳಿಕೊಳ್ಳುತ್ತಿಲ್ಲ. ಅನೇಕ ಇಲಾಖೆಗಳಲ್ಲಿ ಯಡಿಯೂರಪ್ಪನವರ ಕುಟುಂಬದ ಹಸ್ತಕ್ಷೇಪ ನಡೆಯುತ್ತಿದೆ. ಸಚಿವರುಗಳಿಗೆ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಇದು ಹೀಗೆಯೇ ಮುಂದುವರಿದರೆ ರಾಜ್ಯಕ್ಕೆ, ಪಕ್ಷಕ್ಕೆ ಒಳ್ಳೆಯದಲ್ಲ, ಹಾಗಾಗಿ ನಾಯಕತ್ವ ಬದಲಾವಣೆ ಅನಿವಾರ್ಯ ಎಂದು ವಿಶ್ವನಾಥ್ ಪ್ರತಿಪಾದಿಸಿದರು.
ಪಂಚಮಸಾಲಿ ಲಿಂಗಾಯತ ಸಮುದಾಯದವರೇ ಬೇಕಾದರೆ ಮುಖ್ಯಮಂತ್ರಿ ಆಗಲಿ ಎಂದರು.


ನಿಮ್ಮ ಕಾಮೆಂಟ್ ಬರೆಯಿರಿ