ದೇಶದಲ್ಲಿ ಪೆಟ್ರೋಲ್ -ಡೀಸೆಲ್ ಬೆಲೆ ಮತ್ತೆ ಏರಿಕೆ

ನವದೆಹಲಿ: ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಭಾನುವಾರ ಮತ್ತೆ ಏರಿಕೆಯಾಗಿದೆ. ಪೆಟ್ರೋಲ್ 36 ಪೈಸೆ ಮತ್ತು ಡೀಸೆಲ್ 17 ಏರಿಕೆ ಏರಿಕೆಯಾಗಿದೆ.
ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಭಾನುವಾರ ದೇಶಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಹೆಚ್ಚಿಸಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ಗರಿಷ್ಠ ಮಟ್ಟಕ್ಕೆ ತಲುಪಿದೆ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮೂಲಗಳ ಪ್ರಕಾರ ಪ್ರತೀ ಲೀಟರ್ ಪೆಟ್ರೋಲ್ 36 ಪೈಸೆ ಮತ್ತು ಡೀಸೆಲ್ 17 ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 102.9 ರೂ.ಗಳಿಗೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 94.77ರೂ ಗೆ ಹೆಚ್ಚಿಗೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 99.57ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 89.42 ರೂ ಗೆ ಏರಿಕೆಯಾಗಿದೆ.
ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 105.63ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 96.97 ರೂ ಗೆ ಏರಿಕೆಯಾಗಿದೆ. ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 99.51ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 92.33 ರೂ ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 100.49 ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 93.96 ರೂ ಗೆ ಏರಿಕೆಯಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ...| ಹುಲಿ-ಕರಡಿ ಮಧ್ಯೆ "ಅಪರೂಪದ" ಮುಖಾಮುಖಿ; ಆಕ್ರಮಣಕಾರಿ ಕರಡಿಗೆ ಹುಲಿಯ ತಣ್ಣನೆಯ ಉತ್ತರ | ವೀಕ್ಷಿಸಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement