ನೂತನ ಶಾಸಕರಿಗೆ ಇಂದಿನಿಂದ ಮೂರು ದಿನ ತರಬೇತಿ

ಬೆಂಗಳೂರು: ರಾಜ್ಯದ 16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾಗಿರುವ ಸದಸ್ಯರಿಗೆ ಬೆಂಗಳೂರಿನ (Bengaluru) ನೆಲಮಂಗಲದ ಸಮೀಪ ಇರುವ ಧರ್ಮಸ್ಥಳ ಕ್ಷೇಮವನದಲ್ಲಿ ಇಂದಿನಿಂದ (ಜೂನ್‌ 26 ರಿಂದ 28) ವರೆಗೆ ಮೂರು ದಿನಗಳ ಕಾಲ ತರಬೇತಿ ಶಿಬಿರ ಆಯೋಜಿಸಲಾಗಿದೆ.
ಬೆಂಗಳೂರಿನ ನೆಲಮಂಗಲದಲ್ಲಿರುವ ಧರ್ಮಸ್ಥಳ ಕ್ಷೇಮವನದಲ್ಲಿ ಶಾಸಕರಿಗೆ ತರಬೇತಿ ಶಿಬಿರ ಆಯೋಜಿಸಲಾಗಿದೆ. ಈ ಬಾರಿ ವಿಧಾನಸಭೆಗೆ ಮೊದಲಬಾರಿ ಆಯ್ಕೆಯಾಗಿರುವ ಸುಮಾರು 70 ಶಾಸಕರು ತರಬೇತಿ ಪಡೆಯಲಿದ್ದಾರೆ.
ಕಾರ್ಯಕ್ರಮವನ್ನು ಇಂದು ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ವಿಧಾನಸಭೆ ಸಭಾಪತಿ ಯು.ಟಿ.ಖಾದರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಸಚಿವ ಹೆಚ್​.ಕೆ.ಪಾಟೀಲ್ ಪಾಲ್ಗೊಳ್ಳಲಿದ್ದಾರೆ. ಹಾಗೂ ವಿಶೇಷ ಆಹ್ವಾನಿತರಾಗಿ ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್​, ಜಮೀರ್ ಅಹ್ಮದ್ ಖಾನ್ ಭಾಗಿಯಾಗಲಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ, ಜಮಾತೆ ಇಸ್ಲಾಮಿ ಹಿಂದ್‌ನ ಮಹಮದ್ ಕುಂ ಸೇರಿದಂತೆ ವಿವಿಧ ಧಾರ್ಮಿಕ ಪ್ರಮುಖರು ಭಾಷಣ ಮಾಡಲಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement