ಬೆಂಗಳೂರು: ಏಪ್ರಿಲ್ 28ರಿಂದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಕಾಲೇಜುಗಳ ಹಂತದಲ್ಲೇ ನಡೆಸಲು ಪಿಯು ಬೋರ್ಡ್ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.
ಪ್ರಾಯೋಗಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೋವಿಡ್ ರಿಪೋರ್ಟ್ ಕಡ್ಡಾಯವಲ್ಲ, ದೇಹದ ಉಷ್ಣಾಂಶ ಪರಿಶೀಲಿಸಿ ಒಳಗೆ ಪ್ರವೇಶ ನೀಡಬೇಕು ಎಂದು ಮಾರ್ಗಸೂಚಿ ತಿಳಿಸಿದೆ. ಏಪ್ರಿಲ್ 28ರಿಂದ ಮೇ 18ರ ವರೆಗೆ ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆ ಬಳಿಕ ಆಯಾ ಕಾಲೇಜುಗಳು ಆನ್ಲೈನ್ನಲ್ಲಿ ಅಂಕ ನಮೂದಿಸಬೇಕು. ಮಾಹಿತಿ ಕೊರತೆಯಿಂದ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾದರೆ ಆಯಾ ಕಾಲೇಜಿನ ಪ್ರಾಂಶುಪಾಲರೇ ನೇರ ಹೊಣೆಯಾಗಲಿದ್ದಾರೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.
ವಾರಾಂತ್ಯಗಳಲ್ಲಿ ಕರ್ಫ್ಯೂ ಇರುವ ಕಾರಣ ಶನಿವಾರ ಮತ್ತು ಭಾನುವಾರ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವಂತಿಲ್ಲ. ಆರೋಗ್ಯ ಇಲಾಖೆ ನೀಡಿರುವ ಕೊರೊನಾ ತಡೆ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಪಿಯು ಬೋರ್ಡ್ ಮಾರ್ಗಸೂಚಿ ತಿಳಿಸಿದೆ.
ಕೊರೊನಾ ಹೆಚ್ಚಳದ ಹಿನ್ನೆಲೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಪಿಯುಸಿ ಭೌತಿಕ ತರಗತಿಗಳು ಮೇ 4ರ ವರೆಗೆ ಸ್ಥಗಿತಗೊಂಡಿದೆ. ಪ್ರಥಮ, ದ್ವಿತೀಯ ಪಿಯು ತರಗತಿಗಳಿಗೆ ಆನ್ಲೈನ್ ತರಗತಿ ನಡೆಯಲಿದೆ. ದ್ವಿತೀಯ ಪಿಯು ಪೂರ್ವ ಸಿದ್ಧತೆ ಪರೀಕ್ಷೆಗಳೂ ಸ್ಥಗಿತಗೊಳ್ಳಲಿದ್ದು, ಪ್ರಶ್ನೆ ಪತ್ರಿಕೆಗಳನ್ನು ಅಭ್ಯಾಸ ಪ್ರಶ್ನೆ ಪತ್ರಿಕೆಗಳಾಗಿ ವಿದ್ಯಾರ್ಥಿಗಳಿಗೆ ನೀಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಕಾಲೇಜುಗಳಿಗೆ ನಿರ್ದೇಶನ ನೀಡಿದೆ.



Pavan Kumar
Please exam munda aki because we affected from again covid 19 lockdown
Pavan Kumar
Please 2nd exam date na munda aki
ಕನ್ನಡಿ
ಪವನ ಕುಮಾರರವರೇ, ನಿಮ್ಮ ಹಾಗೂ ಹಲವಾರು ವಿದ್ಯಾರ್ಥಿಗಳ ಆಶಯದಂತೆ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಮುಂದಕ್ಕೆ ಹೋಗಿದೆ.