ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿರುವ ಆಸ್ಪತ್ರೆಯೊಂದರ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯಲ್ಲಿ ಕನಿಷ್ಠ 400 ಜನರು ಸಾವಿಗೀಡಾಗಿದ್ದಾರೆ ಮತ್ತು ಸುಮಾರು 250 ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ವಕ್ತಾರರು ಮಂಗಳವಾರ ಬೆಳಿಗ್ಗೆ ತಿಳಿಸಿದ್ದಾರೆ.
ಅಫ್ಘಾನಿಸ್ತಾನದ ಉಪ ಸರ್ಕಾರಿ ವಕ್ತಾರ ಹಮ್ದುಲ್ಲಾ ಫಿತ್ರತ್ ಈ ಬಗ್ಗೆ ಮಾಹಿತಿ ನೀಡಿ, ಸ್ಥಳೀಯ ಕಾಲಮಾನ ರಾತ್ರಿ 9 ಗಂಟೆ ಸುಮಾರಿಗೆ ಈ ವಾಯುದಾಳಿ ನಡೆದಿದೆ. ಈ ದಾಳಿಯು 2,000 ಹಾಸಿಗೆಗಳ ಸಾಮರ್ಥ್ಯದ ಮಾದಕ ವ್ಯಸನಿಗಳ ಪುನರ್ವಸತಿ ಆಸ್ಪತ್ರೆಗೆ ಅಪ್ಪಳಿಸಿದ್ದು, ಕಟ್ಟಡದ ದೊಡ್ಡ ಭಾಗಗಳು ನಾಶವಾಗಿವೆ ಎಂದು ಹೇಳಿದ್ದಾರೆ.
ಪರಸ್ಪರ ಆರೋಪ-ಪ್ರತ್ಯಾರೋಪ
ಅಫ್ಘಾನ್ ಸರ್ಕಾರಿ ವಕ್ತಾರ ಜಬಿಹುಲ್ಲಾ ಮುಜಾಹಿದ್ ಈ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. “ಪಾಕಿಸ್ತಾನದ ಮಿಲಿಟರಿ ಆಡಳಿತವು ಮತ್ತೊಮ್ಮೆ ಅಫ್ಘಾನಿಸ್ತಾನದ ವಾಯುಪ್ರದೇಶವನ್ನು ಉಲ್ಲಂಘಿಸಿದೆ. ಚಿಕಿತ್ಸೆ ಪಡೆಯುತ್ತಿದ್ದ ವ್ಯಸನಿಗಳನ್ನೇ ಗುರಿಯಾಗಿಸಿ ದಾಳಿ ನಡೆಸಿರುವುದು ಮಾನವೀಯತೆಯ ವಿರುದ್ಧದ ಅಪರಾಧ,” ಎಂದು ಅವರು ‘X’ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನವು ಅಫ್ಘಾನ್ ಸರ್ಕಾರದ ಈ ಆರೋಪಗಳನ್ನು “ಆಧಾರರಹಿತ” ಎಂದು ತಳ್ಳಿಹಾಕಿದೆ. ಕಾಬೂಲ್ನ ಯಾವುದೇ ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡಿಲ್ಲ ಎಂದು ಅದು ಹೇಳಿದೆ.
ಪಾಕಿಸ್ತಾನದ ಮಾಹಿತಿ ಸಚಿವ ಅತಾವುಲ್ಲಾ ತರಾರ್ ಮಾತನಾಡಿ, “ಪಾಕಿಸ್ತಾನಿ ಮಿಲಿಟರಿಯು ಕಾಬೂಲ್ ಮತ್ತು ನಂಗರ್ಹಾರ್ ಪ್ರಾಂತ್ಯದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ನಿಖರವಾದ ವಾಯುದಾಳಿಗಳನ್ನು ನಡೆಸಿದೆ. ತಾಲಿಬಾನ್ ಆಡಳಿತವು ಭಯೋತ್ಪಾದಕರಿಗೆ ಬೆಂಬಲ ನೀಡಲು ಬಳಸುತ್ತಿದ್ದ ತಾಂತ್ರಿಕ ಮೂಲಸೌಕರ್ಯ ಮತ್ತು ಮದ್ದುಗುಂಡು ಸಂಗ್ರಹಣಾ ಕೇಂದ್ರಗಳನ್ನು ನಾಶಪಡಿಸಲಾಗಿದೆ,” ಎಂದು ತಿಳಿಸಿದ್ದಾರೆ.
ಉಲ್ಬಣಗೊಂಡ ಯುದ್ಧದ ಭೀತಿ
ಗಡಿಯಲ್ಲಿ ಉಭಯ ದೇಶಗಳ ನಡುವೆ ಗುಂಡಿನ ಚಕಮಕಿ ನಡೆದು ನಾಲ್ವರು ಸಾವಿಗೀಡಾದ ಬೆನ್ನಲ್ಲೇ ಈ ವಾಯುದಾಳಿ ನಡೆದಿದೆ. ಕಳೆದ ಮೂರು ವಾರಗಳಿಂದ ಪಾಕಿಸ್ತಾನ ಹಾಗೂ ಅಪಘಾನಿಸ್ತಾನದ ನಡುವೆ ಭೀಕರ ಸಂಘರ್ಷ ನಡೆಯುತ್ತಿದೆ. ಫೆಬ್ರವರಿ ಅಂತ್ಯದಲ್ಲಿ ಈ ಸಂಘರ್ಷ ತೀವ್ರಗೊಂಡಿತ್ತು. ಕಳೆದ ಅಕ್ಟೋಬರ್ನಲ್ಲಿ ಖತಾರ್ ಮಧ್ಯಸ್ಥಿಕೆಯಲ್ಲಿ ಏರ್ಪಟ್ಟಿದ್ದ ಕದನ ವಿರಾಮವು ಈಗ ಸಂಪೂರ್ಣವಾಗಿ ಹಳಿತಪ್ಪಿದೆ.
ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರು ಅಫ್ಘಾನಿಸ್ತಾನದೊಂದಿಗೆ “ಮುಕ್ತ ಯುದ್ಧ” (Open War) ಘೋಷಿಸಿದ್ದಾರೆ


ನಿಮ್ಮ ಕಾಮೆಂಟ್ ಬರೆಯಿರಿ