ಕರ್ನಾಟಕದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ, ದೇಶದಲ್ಲಿ ಕೋವಿಡ್‌ ಅಷ್ಟೊಂದು ತೊಂದರೆ ಕೊಡಲ್ಲ: ಕೋಡಿಮಠದ ಶ್ರೀಗಳ ಭವಿಷ್ಯ

ಹೊಸಪೇಟೆ: ಈ ಬಾರಿ ಕೋವಿಡ್ ಹಿಂದಿನಂತೆ ದೊಡ್ಡ ಪ್ರಮಾಣದಲ್ಲಿ ಕೆಡುಕು ಮಾಡುವುದಿಲ್ಲ. ರಾಜ್ಯ ರಾಜಕೀಯದಲ್ಲಿ ಎಷ್ಟೇ ಗೊಂದಲಗಳಿದ್ದರೂ, ಈ ಬಾರಿ ಒಂದೇ ಪಕ್ಷ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುತ್ತದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ನಗರದ ಬಿಜೆಪಿ ನಾಯಕಿ ರಾಣಿ ಸಂಯುಕ್ತ ಅವರ ಮನೆಗೆ ಶುಕ್ರವಾರ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಮಠದ ಶ್ರೀಗಳು, ಈ ಬಾರಿ ಕೋವಿಡ್ ಹಿಂದಿನಂತೆ ದೊಡ್ಡ ಪ್ರಮಾಣದಲ್ಲಿ ತೊಂದರೆ ನೀಡುವುದಿಲ್ಲ, ರಾಜ್ಯ ರಾಜಕೀಯದಲ್ಲಿ ಗೊಂದಲಗಳಿದ್ದರೂ, ಒಂದೇ ಪಕ್ಷ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು.
ಒಲೆ ಹೊತ್ತಿ ಉರಿದರೆ ನಿಲಬಹುದು. ಧರೆಯೇ ಹೊತ್ತಿ ಉರಿದರೆ ನಿಲಬಹುದೇ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಒಲೆ ಹೊತ್ತಿ ಉರಿದರೆ ನಿಲ್ಲಬಹುದು. ಅದರಿಂದ ಅಡುಗೆಯನ್ನೂ ಮಾಡಬಹುದು. ಆದರೆ, ಧರೆ ಹೊತ್ತಿ ಉರಿದರೆ ಯಾರಿಗೂ ನಿಲ್ಲಲು ಸಾಧ್ಯವಿಲ್ಲ. 2023ರಲ್ಲಿ ಜಾಗತಿಕವಾಗಿ ಅಂತಹ ಪ್ರಸಂಗ ಎದುರಾಗುವ ಸಾಧ್ಯತೆಗಳಿವೆ. ಎರಡ್ಮೂರು ದೊಡ್ಡ ದೊಡ್ಡ ತಲೆಗಳು ಉರುಳುತ್ತವೆ. ಸಾಧು- ಸಂತರಿಗೆ ತೊಂದರೆಯಾಗುವ ಲಕ್ಷಣಗಳಿವೆ. ಜಾಗತಿಕವಾಗಿ ಸಮಸ್ಯೆ ಎದುರಾಗುತ್ತದೆ ಎಂದು ಹೇಳಿದರು.
ಹಿಂದೂ ಸಾಂಪ್ರದಾಯದ ಪ್ರಕಾರ ಯುಗಾದಿ ಫಲ ಹೇಳಲಾಗುತ್ತದೆ. ಮಳೆ, ಬೆಳೆ, ವ್ಯಾಪಾರ, ಜನ ಸಾಮಾನ್ಯರ ಬದುಕು, ಬವಣೆ, ರಾಜಕೀಯ ಸ್ಥಿತಿಗತಿ ತಿಳಿಯುತ್ತದೆ. ಅದರಂತೆ ಸಂಕ್ರಾಂತಿ ಫಲವನ್ನೂ ಹೇಳುವ ರೂಢಿಯಿದೆ. ಸಂಕ್ರಾಂತಿ ಬಳಿಕವೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಮೇಕೆದಾಟು : ನದಿಯಲ್ಲಿ ಮುಳುಗಿ ಐವರು ವಿದ್ಯಾರ್ಥಿಗಳು ಸಾವು

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement