ಯತ್ನಾಳರ ನಿಜವಾದ ಗುರಿ ಪ್ರಧಾನಿ ಮೋದಿ; ಸಿಎಂ ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು: ಮೌಲ್ವಿ ತನ್ವೀರ್ ಹಾಶ್ಮಿ ಅವರ ಜೊತೆಗಿನ ನನ್ನ ಫೋಟೋ ಹಿಡ್ಕೊಂಡು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನನ್ನ ವಿರುದ್ದ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ನರೇಂದ್ರ ಮೋದಿ ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಪೋಸ್ಟ್ ಮಾಡಿರುವ ಸಿದ್ದರಾಮಯ್ಯ ಅವರು ಮೌಲ್ವಿ ಹಾಶ್ಮಿ ಅವರ ಜೊತೆಗೆ ಇತರ ಬಿಜೆಪಿ ನಾಯಕರು ಮಾತ್ರವಲ್ಲ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೂ ಸಂಬಂಧ ಹೊಂದಿರುವುದು ಮಾಧ್ಯಮಗಳಲ್ಲಿ ಬಿಡುಗಡೆಯಾಗಿರುವ ಫೋಟೊಗಳು ಸ್ಪಷ್ಟವಾಗಿ ಹೇಳುತ್ತಿವೆ. ದೀರ್ಘಕಾಲದಿಂದ ಹಾಶ್ಮಿ ಅವರಿಗೆ ಅತ್ಯಂತ ಆತ್ಮೀಯರಾಗಿರುವ ಮತ್ತು ಊರಿನಲ್ಲಿ ತನ್ನ ಅಕ್ಕಪಕ್ಕದವರಾಗಿರುವ ಯತ್ನಾಳ ಅವರಿಗೆ ಇದು ತಿಳಿದಿರಲಿಲ್ಲ ಎನ್ನುವುದನ್ನು ನಂಬಲು ಸಾಧ್ಯವೇ ಎಂದು ಅವರು ಪ್ರಶ್ನಿಸಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷತೆ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನ ತಪ್ಪಿಹೋಗಿರುವುದರಿಂದ ಯತ್ನಾಳ ಅವರು ಕೆರಳಿ ಕೆಂಡವಾಗಿದ್ದಾರೆ. ಇದಕ್ಕೆ ಕಾರಣಕರ್ತರಾದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ವಿರುದ್ಧ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದಲೇ ಮೌಲ್ವಿ ತನ್ವೀರ್ ಹಾಶ್ಮಿ ಜೊತೆಗಿನ ನನ್ನ ಫೋಟೋ ತೋರಿಸಿ ಆರೋಪ ಮಾಡಿದ್ದಾರೆ. ಈ ಆರೋಪದ ನಂತರ ಮೌಲ್ವಿ ಅವರ ಜೊತೆಗಿನ ಪ್ರಧಾನಿ ನರೇಂದ್ರ ಮೋದಿ ಅವರ ಸಂಬಂಧದ ವಿವರವೂ ಹೊರಬರಲಿದೆ ಎನ್ನುವುದು ಅವರಿಗೆ ಖಂಡಿತ ಗೊತ್ತಿತ್ತು. ಅವೆಲ್ಲವೂ ಬಯಲಾಗಿ ಪ್ರಧಾನಿ ಮತ್ತು ಬಿಜೆಪಿ ನಾಯಕರು ಮುಜುಗರಕ್ಕೀಡಾಗಲಿ ಎನ್ನುವ ದುರುದ್ದೇಶದಿಂದ ನನ್ನ ವಿರುದ್ಧ ಆರೋಪ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

ಮೌಲ್ವಿ ಹಾಶ್ಮಿ ಅವರ ಜೊತೆಗಿನ ನನ್ನ ಸ್ನೇಹ ಸಂಬಂಧವನ್ನು ನಾನು ಬಹಿರಂಗವಾಗಿಯೇ ಒಪ್ಪಿಕೊಂಡಿದ್ದೇನೆ. ಹಾಶ್ಮಿಯವರೂ ಅವರ ಮೇಲಿನ ಆರೋಪದ ತನಿಖೆಯನ್ನು ಕೇಂದ್ರ ಸರ್ಕಾರವೇ ನಡೆಸಲಿ ಎಂದು ಸವಾಲು ಹಾಕಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಅವರು ತನ್ನ ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯಿಸಲೇ ಬೇಕಾಗುತ್ತದೆ. ಮೌಲಿ ತನ್ವೀರ್ ಹಾಶ್ಮಿ ಅವರಿಗೆ ನಿಜವಾಗಿ ಐಸಿಎಸ್ ಜೊತೆ ಸಂಬಂಧ ಇದ್ದರೆ ಆ ಬಗ್ಗೆ ತನಿಖೆಗೆ ಪ್ರಧಾನಿಯವರು ತಕ್ಷಣ ಆದೇಶ ನೀಡಬೇಕು ಮತ್ತು ಹಾಶ್ಮಿ ಮತ್ತು ತನ್ನ ಸಂಬಂಧದ ವಿವರವನ್ನು ದೇಶದ ಮುಂದಿಡಬೇಕು. ಇದು ಎರಡೂ ಮಾಡದೆ ಇದ್ದರೆ ಇಂತಹ ಸುಳ್ಳು ಆರೋಪ ಮಾಡುವ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

ವ್ಯಾವಹಾರಿಕ ಸಂಬಂಧ ನಿರಾಕರಿಸಿದ ಯತ್ನಾಳ….
ಐಸಿಸ್ ಉಗ್ರರ ಜೊತೆಗೆ ನಂಟು ಹೊಂದಿರುವ ಮೌಲ್ವಿ ತನ್ವೀರ್ ಹಾಶ್ಮಿ ಕುಟುಂಬದ ಜೊತೆಗೆ ನಾನು ವ್ಯಾವಹಾರಿಕ ಪಾಲುದಾರಿಕೆ ಹೊಂದಿದ್ದೇನೆ ಎಂಬ ಆರೋಪವೇ ಸುಳ್ಳು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ. ಬೆಳಗಾವಿ ಸುವರ್ಣಸೌಧದಲ್ಲಿ ಶುಕ್ರವಾರ ಮಾತನಾಡಿದ ಅವರು, “‌ಮೌಲ್ವಿ ಹಾಶ್ಮಿ ಕುಟುಂಬಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಅವರ ವ್ಯವಹಾರದಲ್ಲಿ ನಾನು ಪಾಲುದಾರನಲ್ಲ” ಎಂದು ಹೇಳಿದ್ದಾರೆ.

 

 

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement