ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡಲ್ಲಿ ಮಳೆಯ ಆರ್ಭಟ ಭಾನುವಾರವೂ (ಆಗಸ್ಟ್ 2) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 2ರಂದು ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಅತ್ಯಂತ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಹಾಗೂ ಉಡುಪಿ, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಗಳಲ್ಲಿಗಂಟೆಗೆ 40-50 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಮಳೆ ಸುರಿಯಬಹುದು ಎಂದು ಮುನ್ನೆಚ್ಚರಿಕೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ 50-60 ಕಿ.ಮೀ ವೇಗದ ಗಾಳಿಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಉತ್ತರ ಒಳನಾಡಿನ ಗದಗ, ಬಾಗಲಕೋಟೆ, ಬೀದರ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಅದು ತಿಳಿಸಿದೆ.


ನಿಮ್ಮ ಕಾಮೆಂಟ್ ಬರೆಯಿರಿ