ಶುಲ್ಕ ಕಟ್ಟಲು ಒತ್ತಡ ಹಾಕಿದ ಶಾಲೆಗಳ ವಿರುದ್ಧ ಕ್ರಮಕ್ಕೆ ಶಿಕ್ಷಣ ಸಚಿವರ ಸೂಚನೆ

ಬೆಂಗಳೂರು: ಖಾಸಗಿ ಶಾಲೆಗಳಿಂದ ಶುಲ್ಕ ಕಟ್ಟಲು ಪೋಷಕರಿಗೆ ಒತ್ತಡ ಮತ್ತು ಕೆಲ ಶಾಲೆಗಳಿಂದ ಫೀಸ್ ಕಟ್ಟಲು ಲೋನ್ ಕೊಡಿಸುತ್ತಿರುವ ಸುದ್ದಿ ಮಾಧ್ಯಮಗಳಲ್ಲಿ ಬಂದ ನಂತರ ಅಂತಹ ಶಾಲೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶಕುಮಾರ್ ಸೂಚನೆ ನೀಡಿದ್ದಾರೆ.

ಕಳೆದ ಕೆಲದಿನಗಳಿಂದ ಖಾಸಗಿ ಶಾಲೆಗಳು ಮಕ್ಕಳ ಪೋಷಕರಿಗೆ ಶಾಲಾ ಶುಲ್ಕ ಕಟ್ಟುವಂತೆ ಒತ್ತಡ ಹಾಕುತ್ತಿದ್ದಾರೆ. ಮತ್ತು ಫೀಸ್ ಕಟ್ಟಲು ಲೋನ್ ಕೊಡಿಸುವುದಾಗಿ ಹೇಳುತ್ತಿದ್ದಾರೆ ಎಂದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಅವರು, ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದ್ದು,, ಫೀಸ್ ಕಟ್ಟಲು ಮತ್ತು ಇತರ ವಿಷಯವಾಗಿ ಕಿರುಕುಳ ನೀಡುತ್ತಿರುವ ಶಾಲೆಗಳ ಬಗ್ಗೆ ಸ್ಥಳೀಯ ಬಿಇಓಗಳಿಗೆ ಪೋಷಕರು ದೂರು ಕೊಟ್ಟರೆ ಅಂತಹ ಶಾಲೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಹೇಳಿದ್ದಾರೆ. ಯಾವುದೇ ಶಾಲೆಗಳು ಪೋಷಕರಿಗೆ ಶುಲ್ಕ ಕಟ್ಟಲು ಒತ್ತಡ ಹಾಕಬಾರದು. ಕೊರೊನಾ ಪರಿಸ್ಥಿತಿಯಲ್ಲಿ ಪೋಷಕರಿಗೆ ಶುಲ್ಕಕ್ಕೆ ಪೀಡಿಸುವುದು ಸರಿಯಲ್ಲ. ಇಂತಹ ಶಾಲೆಗಳ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಆದೇಶಿಸಿದ್ದಾರೆ.
ಸಚಿವರ ಸೂಚನೆ ಬೆನ್ನಲ್ಲೇ ಶುಲ್ಕ ಕಟ್ಟಲು ಒತ್ತಡ ಹಾಕುತ್ತಿರುವ ಶಾಲೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು, ಎಲ್ಲಾ ಬಿಇಓಗಳಿಗೆ ಆದೇಶ ಹೊರಡಿಸಿದ್ದಾರೆ. ಯಾವುದೇ ಶಾಲೆಗಳು ಶುಲ್ಕ ಪಡೆಯಲು ಒತ್ತಡ ಹಾಕುತ್ತಿದ್ದರೂ ಅಂತಹ ಶಾಲೆಗಳ ಮೇಲೆ ಕ್ರಮ ತೆಗೆದುಕೊಳ್ಳಿ. ಶಾಲೆಗಳ ಮೇಲೆ ಕ್ರಮ ತೆಗೆದುಕೊಂಡ ಬಳಿಕ ಇಲಾಖೆಗೆ ಸಂಪೂರ್ಣ ಮಾಹಿತಿ ನೀಡಿ ಎಂದು ಬಿಇಓಗಳಿಗೆ ಆಯುಕ್ತರ ಸೂಚನೆ ನೀಡಿದ್ದಾರೆ.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement