ನಾಳೆ ಉತ್ತರ ಕನ್ನಡ ಜಿಲ್ಲೆ ಪ್ರವಾಹಪೀಡಿತ ಸ್ಥಳಗಳಿಗೆ ಸಿಎಂ ಬೊಮ್ಮಾಯಿ ಭೇಟಿ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಇಂದು ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಭೀಕರ ಪ್ರವಾಹದಿಂದ ತತ್ತರಿಸಿರುವ ಜಿಲ್ಲೆಗಳಿಗೆ ನಾಳೆಯಿಂದಲೇ (ಗುರುವಾರದಿಂದ) ಪ್ರವಾಸ ಕೈಗೊಳ್ಳುವುದಾಗಿಯೂ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ನಾಳೆ ಅವರು ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಈ ಬಗ್ಗೆ ವಿಧಾನಸೌಧದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಸಿಎಂ ಬೊಮ್ಮಾಯಿ ಪ್ರಕಟಿಸಿದ್ದಾರೆ.ನಾಳೆ ಉತ್ತರ ಕನ್ನಡದ ನೆರೆ ಪೀಡಿತ ಪ್ರದೇಶಗಳ ವೀಕ್ಷಣೆ ಮಾಡಲಿದ್ದಾರೆ.
ಈ ಬಾರಿ ಕರಾವಳಿ ಮತ್ತು ಮಲೆನಾಡಿನಲ್ಲಿ ಸುರಿದ ಭಾರೀ ಮಳೆಯಿಂದ ಉತ್ತರ ಕನ್ನಡ ಜಿಲ್ಲೆ ಬಹುತೇಕ ಮುಳುಗಡೆಯಾಗಿತ್ತು. ಕಾರವಾರ, ಅಂಕೋಲಾ, ಶಿರಸಿ, ಹೊನ್ನಾವರ, ಯಲ್ಲಾಪುರ, ದಾಂಡೇಲಿ, ಕುಮಟಾ ಸೇರಿದಂತೆ ಹಲವೆಡೆ ಭಾರೀ ಆಸ್ತಿಪಾಸ್ತಿ ಹಾನಿಯಾಗಿವೆ. ಈ ಹಿನ್ನೆಲೆಯಲ್ಲಿ ನಾಳೆ (ಜುಲೈ 29) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರ ಕನ್ನಡ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ.
ನಾಳೆ (ಜುಲೈ 29)ಕಾರವಾರಕ್ಕೆ ಹೋಗಿ ಅಲ್ಲಿನ ಸಮಗ್ರ ಪರಿಸ್ಥಿತಿ ಅರ್ಥ ಮಾಡಿಕೊಂಡು ನಂತರ ಸಭೆ ಮಾಡಿ ತೀರ್ಮಾನ ಮಾಡುತ್ತೇನೆ. ಉತ್ತರ ಕನ್ನಡದಲ್ಲಿ ಪ್ರವಾಹದಿಂದ ಉಂಟಾಗಿರುವ ನಷ್ಟವನ್ನು ಗಮನಿಸಿ ಬಳಿಕ ಪರಿಹಾರದ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ತಿಳಿಸಿದ್ದಾರೆ .
ಇದೇ ವೇಳೆ, ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳುವ ವಿಚಾರವಾಗಿಯೂ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಸಮಯ ಕೇಳಿದ್ದೇನೆ. ಅವರು ಸಮಯ ಕೊಟ್ಟರೆ ಪ್ರಧಾನಿ ಮೋದಿ ಭೇಟಿಗೆ ಹೋಗುತ್ತೇನೆ. ನನ್ನ ಮೊದಲ ದೆಹಲಿ ಭೇಟಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಜೆ.ಪಿ. ನಡ್ಡಾರನ್ನು ಭೇಟಿಯಾಗುವುದು. ದೆಹಲಿಗೆ ಹೋಗಿ ನಮ್ಮ ಕೇಂದ್ರದ ನಾಯಕರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement