ಬಿಹಾರ ಚುನಾವಣೆ : ವಾರಗಳ ಹಗ್ಗಜಗ್ಗಾಟದ ನಂತರ ಇಂಡಿಯಾ ಬಣದ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್‌ ಹೆಸರು ಘೋಷಣೆ

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಅನೇಕ ದಿನಗಳ ಊಹಾಪೋಹಗಳ ನಂತರ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಗುರುವಾರ ಘೋಷಿಸಲಾಯಿತು.
ವಿಕಾಸಶೀಲ್ ಇನ್ಸಾನ್ ಪಕ್ಷದ ಮುಖ್ಯಸ್ಥ ಮುಖೇಶ ಸಹಾನಿ ಅವರನ್ನು ಮೈತ್ರಿಕೂಟದ ಉಪಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಸೀಟು ಹಂಚಿಕೆ ಮತ್ತು ಅಭ್ಯರ್ಥಿಗಳ ಘೋಷಣೆಯ ಕುರಿತು ಮಹಾಘಟಬಂಧನದಲ್ಲಿ ವಾರಗಳ ಕಾಲ ನಡೆದ ತಿಕ್ಕಾಟದ ನಂತರ ಈ ಘೋಷಣೆ ಬಂದಿದೆ.
“ಎಲ್ಲಾ ಹಿರಿಯ ನಾಯಕರೊಂದಿಗೆ ಮಾತುಕತೆ ನಡೆಸಿದ ನಂತರ, ಮುಂಬರುವ ಬಿಹಾರ ಚುನಾವಣೆಯಲ್ಲಿ ತೇಜಸ್ವಿ ಯಾದವ್ ಅವರನ್ನು ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಲು ಮೈತ್ರಿಕೂಟ ನಿರ್ಧರಿಸಿದೆ. ಅವರಿಗೆ ಮುಂದೆ ದೀರ್ಘ ಭವಿಷ್ಯವಿದೆ” ಎಂದು ಮಹಾಘಟಬಂಧನದಲ್ಲಿನ ಬಿರುಕುಗಳ ನಡುವೆ ಸಮಸ್ಯೆ ನಿವಾರಣೆಗೆ ಪಾಟ್ನಾಗೆ ಧಾವಿಸಿದ ಹಿರಿಯ ಕಾಂಗ್ರೆಸ್ ನಾಯಕ ಅಶೋಕ ಗೆಹ್ಲೋಟ್ ಹೇಳಿದ್ದಾರೆ. ಈ ನಿರ್ಧಾರವನ್ನು ತಮ್ಮ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಬಲಿಸಿದ್ದಾರೆ ಎಂದು ಪ್ರತಿಪಾದಿಸಿದರು. ಮತ್ತು ಅದೇ ಹುದ್ದೆಯನ್ನು ಹಿಂದುಳಿದ ವರ್ಗಗಳ ಮತ್ತೊಬ್ಬ ನಾಯಕ ಅಲಂಕರಿಸುತ್ತಾರೆ ಎಂದು ಗೆಹ್ಲೋಟ್ ಹೇಳಿದರು.

ಪ್ರಮುಖ ಸುದ್ದಿ :-   ತೃಣಮೂಲ ಬಂಡಾಯ ಸಂಸದರನ್ನು ಯಾಕೆ ಆಹ್ವಾನಿಸಿದ್ದೀರಿ ? : ಸರ್ವಪಕ್ಷ ಸಭೆಗೆ ಕೆಲಕಾಲ ಬಹಿಷ್ಕರಿಸಿದ ವಿಪಕ್ಷಗಳು

ತೇಜಸ್ವಿ ಯಾದವ್ ಈ ಹಿಂದೆ ನಿತೀಶಕುಮಾರ ಸರ್ಕಾರದಲ್ಲಿ ಎರಡು ಅವಧಿಗೆ ಬಿಹಾರದ ಉಪಮುಖ್ಯಮಂತ್ರಿಯಾಗಿದ್ದರು. “ನಾವು ಮಹಾಘಟಬಂಧನದ ನಾಯಕರು, ಕೇವಲ ಸರ್ಕಾರ ರಚಿಸಲು ಅಥವಾ ಸ್ಥಾನಗಳನ್ನು ಪಡೆಯಲು ಇಲ್ಲಿದ್ದೇವೆ” ಎಂದು ತೇಜಸ್ವಿ ಯಾದವ್‌ ಹೇಳಿದರು. “ನಾವು ಬಿಹಾರಕ್ಕಾಗಿ ಕೆಲಸ ಮಾಡಲು ಮತ್ತು ಎನ್‌ಡಿಎಯ ಡಬಲ್-ಎಂಜಿನ್ ಸರ್ಕಾರವನ್ನು ಕೊನೆಗೊಳಿಸಲು ಬಯಸುತ್ತೇವೆ, ಒಂದು ಎಂಜಿನ್ ಭ್ರಷ್ಟಾಚಾರದಿಂದ ಮತ್ತು ಇನ್ನೊಂದು ಎಂಜಿನ್ ಅಪರಾಧದಿಂದ ನಡೆಸಲ್ಪಡುತ್ತದೆ ಎಂದು ವಾಗ್ದಾಳಿ ನಡೆಸಿದರು.
ಪತ್ರಿಕಾ ಸಂವಾದದಲ್ಲಿ ಮಾತನಾಡಿದ ತೇಜಸ್ವಿ ಯಾದವ್‌ ಅವರು, ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA)ವನ್ನು ಅದರ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದಿರುವುದಕ್ಕೆ ವಾಗ್ದಾಳಿ ನಡೆಸಿದರು.

ಅವರು ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದಿಲ್ಲ. ಬಿಜೆಪಿಗೆ ಅವರನ್ನು ಮುಖ್ಯಮಂತ್ರಿ ಮಾಡುವ ಉದ್ದೇಶವಿಲ್ಲ ಎಂದು ನಾವು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇವೆ” ಎಂದು ಅವರು ಹೇಳಿದರು.
. ರಾಜ್ಯದಲ್ಲಿ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 14 ರಂದು ಫಲಿತಾಂಶ ಪ್ರಕಟವಾಗಲಿದೆ.
ತಮ್ಮ ಸಾಂಪ್ರದಾಯಿಕ ರಾಘೋಪುರ ಕ್ಷೇತ್ರದಿಂದ ಸ್ಪರ್ಧಿಸಲಿರುವ ತೇಜಸ್ವಿ ಯಾದವ್, ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ತಮ್ಮನ್ನು ಅನುಮೋದಿಸಿದ್ದಕ್ಕಾಗಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ಇಲ್ಲಿಯವರೆಗೆ, ಕಾಂಗ್ರೆಸ್ ತೇಜಸ್ವಿ ಯಾದವ್‌ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಔಪಚಾರಿಕವಾಗಿ ಬಿಂಬಿಸುವುದನ್ನು ತಪ್ಪಿಸಿತ್ತು.
ನಡೆಯಲಿದೆ.

ಪ್ರಮುಖ ಸುದ್ದಿ :-   ಸೋನಂ ವಾಂಗ್ಚುಕ್ ಉಪವಾಸ ಅಂತ್ಯಗೊಳಿಸಲು ಸಿದ್ಧ ಎಂದ ಪತ್ನಿ ; ಆದರೆ ಅದಕ್ಕೆ ಎರಡು ಷರತ್ತುಗಳು...

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement