ಹುಬ್ಬಳ್ಳಿಯ ಉಣಕಲ್ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಬಾಲಿವುಡ್ ನಟಿ ಸಾರಾ ಅಲಿ ಖಾನ್ ಭೇಟಿ…

ಹುಬ್ಬಳ್ಳಿ: ಬಾಲಿವುಡ್ ನಟಿ ಸಾರಾ ಅಲಿಖಾನ್ ಹುಬ್ಬಳ್ಳಿಯ ಐತಿಹಾಸಿಕ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನಕ್ಕ ಭೇಟಿ ನೀಡಿದ್ದಾರೆ. ಅದಕ್ಕೆ ಸಂಬಂಧಿಸಿದ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಶಾಸಕ ಮಹೇಶ ಟೆಂಗಿನಕಾಯಿ ಸಹ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿ ನಟಿ ಸಾರಾ ಅಲಿಖಾನ್ ಹುಬ್ಬಳ್ಳಿಯ ಚಂದ್ರಮೌಳೇಶ್ವರ ದೇವಸ್ಥಾನಕ್ಕ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ನಟ ಸೈಫ್ ಅಲಿಖಾನ್ ಪುತ್ರಿಯಾಗಿರುವ ಸಾರಾ ಅಲಿ ಖಾನ್ ಹುಬ್ಬಳ್ಳಿಯ ಉಣಕಲ್‌ನ ಚಂದ್ರಮೌಳೀಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಸೆಲ್ವಾರ್ ಕಮೀಜ್ ತೊಟ್ಟು ದೇವಾಲಯಕ್ಕೆ ಬಂದಿದ್ದ ಸಾರಾ ಅಲಿ ಖಾನ್, ದೇವಾಲಯದ ಆವರಣದಲ್ಲಿ ಕೆಲ ಚಿತ್ರಗಳನ್ನು ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಕಲ್ಯಾಣ ಚಾಲುಕ್ಯರಿಂದ ನಿರ್ಮಾಣವಾದ ಹಾಗೂ ಅಮರ ಶಿಲ್ಪಕಲೆಗೆ ಪ್ರಸಿದ್ಧಿ ಪಡೆದಿರುವ ಹುಬ್ಬಳ್ಳಿಯ ಉಣಕಲ್ ನಲ್ಲಿರುವ ಐತಿಹಾಸಿಕ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಶಿವ ಭಕ್ತೆಯಾದ ಬಾಲಿವುಡ್ ನಟಿ ಸಾರಾ ಅಲಿ ಖಾನ್‌ (Sara Ali Khan) ಭೇಟಿ ನೀಡಿದ ವಿಷಯ ತಿಳಿದು ಸಂತೋಷವಾಗಿದೆ ಎಂದು ಹೇಳಿದ್ದಾರೆ.

ಇಂತಹ ಐತಿಹಾಸಿಕ ಪ್ರೇಕ್ಷಣೀಯ ಸ್ಥಳಗಳಿಗೆ ಸೆಲೆಬ್ರಿಟಿಗಳು ಭೇಟಿ ನೀಡಿದಾಗ ನಮ್ಮ ದೇಶದ ಸಂಸ್ಕೃತಿ ಹಾಗೂ ಪರಂಪರೆ ಎಲ್ಲೆಡೆ ಪಸರಿಸುವುದಲ್ಲದೇ,ನಮ್ಮ ನಗರವು ಪ್ರವಾಸಿ ತಾಣವಾಗಿ ಬಿಂಬಿತಗೊಳ್ಳುವ ಮೂಲಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುತ್ತದೆ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಆದರೆ, ಸಾರಾ ಅಲಿ ಖಾನ್ ಅವರು ಯಾವಾಗ ದೇವಾಲಯಕ್ಕೆ ಭೇಟಿ ನೀಡಿದ್ದಾರೆ, ಯಾವ ಕಾರಣಕ್ಕೆ ಹುಬ್ಬಳ್ಳಿಗೆ ಬಂದಿದ್ದರು ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement