ಸರಾಸರಿಗಿಂತ ಕಡಿಮೆಯಿರುವ ಜಿಲ್ಲೆಗಳಲ್ಲಿ ಕೋವಿಡ್ -19 ಲಸಿಕಾ ಕಾರ್ಯಕ್ರಮ ಚುರುಕಿಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಕೋವಿಡ್ -19 ಲಸಿಕಾ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ನಡೆಯಿತು.
ಮೊದಲನೇ ಹಾಗೂ 2ನೇ ಡೋಸ್ ಲಸಿಕೆ ಪ್ರಮಾಣದಲ್ಲಿ ರಾಜ್ಯ ಸರಾಸರಿಗಿಂತ ಕಡಿಮೆ ಇರುವ ಜಿಲ್ಲೆಗಳು ತಿಂಗಳ ಅಂತ್ಯದೊಳಗೆ ರಾಜ್ಯ ಸರಾಸರಿಯನ್ನು ತಲುಪಬೇಕು ಎಂದು‌ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಯಿತು.
ಜಿಲ್ಲಾಡಳಿತಗಳು ದಕ್ಷತೆಯಿಂದ ಪ್ರತಿ ಗ್ರಾಮದ ಕಟ್ಟಕಡೆಯ ಮನೆಗೂ ಔಷಧ ಕಿಟ್ ಗಳನ್ನು ತಲುಪಿಸಬೇಕು. ಮನೆ ಪ್ರತ್ಯೇಕತೆಯಲ್ಲಿರುವವರಿಗೆ ಸರಿಯಾದ ಚಿಕಿತ್ಸೆ ಯನ್ನು ನೀಡುವಂತೆ ಸೂಚನೆ ನೀಡಲಾಯಿತು.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು ತಾಲ್ಲೂಕುಗಳಿಗೆ ಭೇಟಿ ನೀಡಿ ಔಷಧ ವಿತರಣೆಯ ಬಗ್ಗೆ ಪರಿಶೀಲಿಸಬೇಕು. ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಮೇಲ್ವಿಚಾರಣೆ ಕೈಗೊಳ್ಳಲು ಸೂಚಿಸಲಾಯಿತು. ಪ್ರಯೋಗಾಲಯದ ವರದಿ ಬಂದ ತಕ್ಷಣ ಟೆಲಿ ಟ್ರಯಾಜಿಂಗ್ ಮಾಡಬೇಕು. .ಶೇ94ಷ್ಟು ಸೋಂಕಿತರು ಹೋಮ್ ಐಸೋಲೇಶನ್ ಇರುವುದರಿಂದ ಮನೆಯವರಿಗೆ ಹರಡದಂತೆ ಕ್ರಮ ಕೈಗೊಳ್ಳಬೇಕು. ಸೋಂಕಿತರ ಮನೆಯವರಿಗೂ ಪರೀಕ್ಷೆ ಮಾಡಿ ಅಗತ್ಯವಿದ್ದರೆ ಚಿಕಿತ್ಸೆ ನೀಡಲು ಸೂಚಿಸಲಾಯಿತು.
ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಪ್ರಾರಂಭ ಮಾಡಿ ವೈದ್ಯರು ಹಾಗೂ ಎಎನ್ಎಂಗಳು ಮನೆ ಮನೆ ಭೇಟಿ ಮಾಡಬೇಕು. ಇದಕ್ಕೆ ವಿಶೇಷ ಎಸ್.ಒ. ಪಿ ರೂಪಿಸಲು ನಿರ್ಧರಿಸಲಾಯಿತು.
ಬೆಂಗಳೂರಿನಲ್ಲಿ ಖಾಸಗಿ ಹಾಗೂ ಸರ್ಕಾರಿ ಒಪಿಡಿಗಳನ್ನು ಬಲಪಡಿಸಲು ಹಾಗೂ ಜನಸಂಖ್ಯೆಗೆ ಅನುಗುಣವಾಗಿ ಹೊಸ ಒಪಿಡಿಗಳನ್ನು ತೆರೆಯಲು ಸೂಚಿಸಲಾಯಿತು.
ಕೆಲಸಕ್ಕಾಗಿ ಹೊರ ರಾಜ್ಯಗಳಿಂದ ಕಾರ್ಮಿಕರನ್ನು ಕರೆತರುವ ರಾಜ್ಯದ ಕೈಗಾರಿಕೆಗಳಿಗೆ ಕಾರ್ಮಿಕರ ಲಸಿಕೆ ಹಾಗೂ ಚಿಕಿತ್ಸೆ ಕುರಿತು ವಿಶೇಷ ಎಸ್.ಒ.ಪಿ ರೂಪಿಸಲು ಸೂಚಿಸಲಾಯಿತು.
ಎಲ್ಲ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವುದರಿಂದ ಕೋ- ಮಾರ್ಬಿಡಿಟಿ ಇರುವವರನ್ನು ಗುರುತಿಸಿ, ಹೋಮ್ ಐಸೋಲೇಶನ್ ನಲ್ಲಿರುವವರಿಗೆ ಟೆಸ್ಟ್ ಮಾಡಿ ಚಿಕಿತ್ಸೆ ನೀಡುವಂತೆ ಸೂಚಿಸಲಾಯಿತು.
ಕೋ- ಮಾರ್ಬಿಡಿಟಿ ಇರುವವರು ಹಾಗೂ 60 ವರ್ಷಗಳಿಗೂ ಮೇಲ್ಪಟ್ಟವರಿಗೆ ಪರೀಕ್ಷೆಗಳನ್ನು ಹೆಚ್ಚಿಸಬೇಕು. ಮತ್ತು ಔಷಧಿ ಒದಗಿಸಬೇಕು ಹಾಗೂ ಎಲ್ಲಾ ಜಿಲ್ಲೆಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆಗೆ ಹೆಚ್ಚು ಒತ್ತು ನೀಡಬೇಕು.ಮುಂಚೂಣಿ ಕಾರ್ಯಕರ್ತರು ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಅಭಿಯಾನ ಕೈಗೊಳ್ಳಬೇಕು.
ಲಸಿಕೆ ಪಡೆದು 90 ದಿನ ಪೂರೈಸಿರುವವರ ಪಟ್ಟಿ ತಯಾರಿಸಿ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಲಸಿಕೆ ಕಾರ್ಯಕ್ರಮದ ಮೇಲ್ವಿಚಾರಣೆಯ ಜವಾಬ್ದಾರಿ ನೀಡುವಂತೆ ಸೂಚಿಸಲಾಯಿತು.
ಕರ್ನಾಟಕದಲ್ಲಿ ಪರೀಕ್ಷೆಗಳು ಹೆಚ್ಚಾಗಿರುವುದರಿಂದ ಪ್ರಕರಣಗಳು ಹೆಚ್ಚಿದ್ದರೂ ಕೋವಿಡ್ ಪರಿಸ್ಥಿತಿ ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದೇವೆ. ಮುನ್ನೆಚ್ಚರಿಕಾ ಕ್ರಮಗಳು ಉತ್ತಮವಾಗಿದ್ದರೆ ಕೋವಿಡ್ ಮೂರನೇ ಅಲೆ ಏರುಗತಿ ತಲುಪಿದರೂ ಆತಂಕ ಪಡದೆ ಯಶಸ್ವಿಯಾಗಿ ಮೂರನೇ ಅಲೆ ನಿಭಾಯಿಸಬಹುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಪ್ರಮುಖ ಸುದ್ದಿ :-   ಅಶ್ಲೀಲ‌ ವೀಡಿಯೊ ಇಟ್ಟುಕೊಳ್ಳುವುದು ಅಪರಾಧ, ಡಿಲೀಟ್‌ ಮಾಡಿ : ಎಸ್‌ಐಟಿ ಮುಖ್ಯಸ್ಥರು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement