ನಾಳೆ ಹುಬ್ಬಳ್ಳಿಯಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ಸಿಗೆ ಸೇರ್ಪಡೆ

ಹುಬ್ಬಳ್ಳಿ: ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಜುಲೈ 30ರಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಜೆಡಿಎಸ್ ತೊರೆದು ಕಾಂಗ್ರೆಸ್ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಅವರು ಕಾಂಗ್ರೆಸ್ಸಿನ ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರಲಿದ್ದಾರೆ.
ನಾಳೆ (ಜುಲೈ 30ರಂದು) ಬೆಳಿಗ್ಗೆ 9 :30ಕ್ಕೆ ಹುಬ್ಭಳ್ಳಿಯ ಗೋಕುಲ ಗಾರ್ಡನ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಮಧು ಬಂಗಾರಪ್ಪ ಪಕ್ಷವನ್ನು ಸೇರಲಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಬರಮಾಡಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ನಾಳೆ (ಜುಲೈ 30ರಂದು) ಹುಬ್ಬಳ್ಳಿ ಗೋಕುಲ ಗಾರ್ಡನ್‌ನಲ್ಲಿ ಕಾಂಗ್ರೆಸ್ಸಿನ ಏಳು ಜಿಲ್ಲೆಗ ವಿಭಾಗೀಯ ಮಟ್ಟದ ಸಂಘಟನಾ ಸಭೆ ನಡೆಯಲಿದ್ದು ಅದರಲ್ಲಿ
ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ರಾಜ್ಯ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮೊದಲಾದ ಕಾಂಗ್ರೆಸ್‌ ನಾಯಕರು ಪಾಲ್ಗೊಳ್ಳಲಿದ್ದಾರೆ.
ಮಾರ್ಚ್‌ ತಿಂಗಳಿನಲ್ಲಿಯೇ ಮಧು ಬಂಗಾರಪ್ಪ ಕಾಂಗ್ರೆಸ್ ಸೇರುವುದಾಗಿ ಪ್ರಕಟಿಸಿದ್ದರು. ಕಾಂಗ್ರೆಸ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಈಗ ಜುಲೈ 30ರಂದು ಬೆಂಬಲಿಗರ ಜೊತೆ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement