ನವ ದೆಹಲಿ: ಕೊರೊನಾದಿಂದ ತಂದೆ ತಾಯಿ ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳು ಹಣ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.
ಪಿಎಂ ಕೇರ್ ಫಂಡ್‌ನಿಂದ ಹಣ ನೀಡಲು ಕೇಂದ್ರ ನಿರ್ಧಾರ ನಿರ್ಧರಿಸಿದ್ದು, ಕೊವಿಡ್ ಸೋಂಕಿನಿಂದ ತಂದೆ-ತಾಯಿ ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣವನ್ನು ಒದಗಿಸಲು ಸಹ ಕೇಂದ್ರ ಸರ್ಕಾರ ನಿರ್ಧರಿಸಿದೆ. ಪಿಎಂ ಕೇರ್ಸ್ ಫಂಡ್‌ನಿಂದ ಮಕ್ಕಳು 18 ವರ್ಷ ತುಂಬಿದ ನಂತರ ಮಾಸಿಕ ಸ್ಟೈಫಂಡ್ ನೀಡಲು ಸರ್ಕಾರ ನಿರ್ಧರಿಸಿದ್ದು, 23 ನೇ ವರ್ಷಕ್ಕೆ ಕಾಲಿಟ್ಟಾಗ 10 ಲಕ್ಷ ರೂ ವಿಮೆ ಒದಗಿಸುವುದಾಗಿ ಪ್ರಧಾನಿ ಮಂತ್ರಿ ಕಾರ್ಯಾಲಯದಿಂದ ಪ್ರಕಟಿಸಲಾಗಿದೆ.
ಕೊವಿಡ್ ಸೋಂಕಿನಿಂದ ಅದೆಷ್ಟೋ ಮಕ್ಕಳ ತಂದೆ-ತಾಯಿಗಳು ಮೃತಪಟ್ಟಿದ್ದಾರೆ. ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ದೇಶದಲ್ಲಿ 2021ರ ಏಪ್ರಿಲ್ 1ರಿಂದ ಇಲ್ಲಿಯವರೆಗೆ 577 ಮಕ್ಕಳು ಅನಾಥರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ.
ಕೊರೊನಾದಿಂದ ಅನಾಥರಾದ ಮಕ್ಕಳನ್ನು ಗುರುತಿಸಿ ಶನಿವಾರ ಸಂಜೆಯೊಳಗೆ ಅವರ ವಿವರವನ್ನು ಎನ್‌ಸಿಪಿಸಿಆರ್ ವೆಬ್ ಸೈಟ್ ಗೆ ಅಪ್ಲೋಡ್ ಮಾಡುವಂತೆ ಜಿಲ್ಲಾಡಳಿತಗಳಿಗೆ ಸುಪ್ರೀಂಕೋರ್ಟ್ ಸೂಚಿಸಿದೆ. ಜತೆಗೆ ಅನಾಥ ಮಕ್ಕಳ ಬಗ್ಗೆ ಸುಪ್ರೀಂ ಕೋರ್ಟ್ ಆದೇಶಕ್ಕೆ ಕಾಯದೇ ಮಕ್ಕಳನ್ನ ನೋಡಿಕೊಳ್ಳಬೇಕು ಎಂದು ಸಹ ತಿಳಿಸಿರುವ ಕೋರ್ಟ್, ಮುಂದಿನ ಮಂಗಳವಾರ ಈ ಕುರಿತು ವಿಚಾರಣೆ ಮುಂದುವರೆಸುವುದಾಗಿ ತಿಳಿಸಿದೆ.
ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡ ಮಕ್ಕಳಿಗೆ ವಿಶೇಷ ಪರಿಹಾರ ನೀಡುವ ಬಗ್ಗೆ ಮೇ 27 ರಂದು ಕರ್ನಾಟಕದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿತ್ತು. ಕೇಂದ್ರದಿಂದ ಈ ಬಗ್ಗೆ ಹೊಸ ಮಾರ್ಗಸೂಚಿ ಬರಲಿದೆ. ಆ ಬಳಿಕ ಬಂದ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದರು.


ನಿಮ್ಮ ಕಾಮೆಂಟ್ ಬರೆಯಿರಿ