ಕಾಂಗ್ರೆಸ್‌ ಅಧಕಾರಕ್ಕೆ ಬಂದರೆ ಕೃಷಿ ಕಾಯ್ದೆ ರದ್ದು:ಪ್ರಿಯಾಂಕಾ

ಲಖನೌ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೂತನ ಕೃಷಿ ಕಾಯ್ದೆಗಳನ್ನು ರದ್ದುಪಡಿಸಲಾಗುವುದು ಎಂದು ಕಾಂಗ್ರೆಸ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಬುಧವಾರ ಉತ್ತರ ಪ್ರದೇಶದಲ್ಲಿ ಸಹಾರನ್ ಪುರದಲ್ಲಿ ಕಿಸಾನ್‌ ಪಂಚಾಯತ್ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕರು ಅವಮಾನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಹೊಸದಾಗಿ ತಂದಿರು ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿವೆ. ಈ ಕಾಯ್ದೆಗಳನ್ನು ರದ್ದುಪಡಿಸುವ ತನಕ ಕಾಂಗ್ರೆಸ್ ಹೋರಾಟ ನಡೆಸಲಿದೆ. ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಅಧಿಕಾರಕ್ಕೆ ತಂದರೆ ನೂತನ ಕೃಷಿ ಕಾಯ್ದೆಗಳನ್ನು ರದ್ದುಪಡಿಸುತ್ತೇವೆ ಎಂದು ಭರವಸೆ ನೀಡಿದರು.
ಉತ್ತರ ಪ್ರದೇಶದಲ್ಲಿ ಎದುರಾಗಲಿರುವ ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಕಾಂಗ್ರೆಸ್ ಬೃಹತ್‌ ಸಮಾವೇಶ ನಡೆಸಲು ಆರಂಭಿಸಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement