ಜೂನ್‌ 15ರಿಂದ ಆಗುಂಬೆ ಘಾಟ್‌ ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಶಿವಮೊಗ್ಗ: ಭಾರಿ ಮಳೆಯಿಂದ ಭೂ ಕುಸಿತ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
ಮುಂಗಾರು ಮಳೆ ಆರಂಭವಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಆಗುಂಬೆ ಘಾಟ್‌ನಲ್ಲಿ (Agumbe Ghat) ಜೂ.15ರಿಂದ ಸೆಪ್ಟೆಂಬರ್ 30ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.
ಜೂ.15ರಿಂದ ಬರೋಬ್ಬರಿ ಮೂರೂವರೆ ತಿಂಗಳುಗಳ ಕಾಲ ಆಗುಂಬೆ ಘಾಟ್ ನಲ್ಲಿ ಭಾರೀ ವಾಹನ ಸಂಚಾರ ಇರುವುದಿಲ್ಲ. ಕೇವಲ ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಭಾರಿ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚರಿಸಲು ಸೂಚಿಸಲಾಗಿದೆ. ಉಡುಪಿಯಿಂದ ತೀರ್ಥಹಳ್ಳಿಗೆ ಸಂಚರಿಸುವ ಭಾರಿ ವಾಹನಗಳು ಬದಲಿ ಮಾರ್ಗವಾಗಿ ಉಡುಪಿ-ಕುಂದಾಪುರ-ಸಿದ್ದಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸುವಂತೆ ತಿಳಿಸಲಾಗಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement