ರುಚಿಕರ ಆಹಾರ ನೀಡಿಲ್ಲವೆಂದು ತಾಯಿಯನ್ನೇ ಕೊಂದ ಮಗ….!

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ವ್ಯಕ್ತಿಯೊಬ್ಬರು ತನಗೆ ಬೇಕಾದ ರುಚಿಕರವಾದ ಆಹಾರ ನೀಡಿಲ್ಲ ಎಂಬ ಕಾರಣಕ್ಕೆ ತಾಯಿಯೊಂದಿಗೆ ಜಗಳವಾಡಿದ ನಂತರ 55 ವರ್ಷದ ತಾಯಿಯನ್ನು ಕೊಂದಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಮುರ್ಬಾದ್ ತಾಲೂಕಿನ ವೇಲು ಗ್ರಾಮದಲ್ಲಿ ಭಾನುವಾರ ಸಂಜೆ ಈ ಘಟನೆ ನಡೆದಿದೆ ಎಂದು ಥಾಣೆ ಗ್ರಾಮಾಂತರ ಪೊಲೀಸ್ ನಿಯಂತ್ರಣ ಕೊಠಡಿಯ ಅಧಿಕಾರಿ ತಿಳಿಸಿದ್ದಾರೆ.
ಮನೆಯ ವಿಚಾರವಾಗಿ ಮಹಿಳೆ ಮತ್ತು ಆಕೆಯ ಮಗನ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಭಾನುವಾರ, ವ್ಯಕ್ತಿ ತನ್ನ ತಾಯಿ ತನಗೆ ರುಚಿಕರವಾದ ಆಹಾರವನ್ನು ಬೇಯಿಸಿ ಬಡಿಸಲಿಲ್ಲ ಎಂಬ ಕಾರಣಕ್ಕೆ ಆಕೆಯೊಂದಿಗೆ ಜಗಳವಾಡಿದ್ದಾನೆ, ಕೋಪದ ಭರದಲ್ಲಿ ತಾಯಿಯ ಕುತ್ತಿಗೆಯ ಮೇಲೆ ಕುಡುಗೋಲಿನಿಂದ ಹಲ್ಲೆ ಮಾಡಿದ್ದಾನೆ, ನಂತರ ತೀವ್ರ ಗಾಯದಿಂದ ಅವಳು ಕುಸಿದು ಮೃತಪಟ್ಟಿದ್ದಾಳೆ ಎಂದು ಎಫ್‌ಐಆರ್ ಉಲ್ಲೇಖಿಸಿ ಪೊಲೀಸರು ತಿಳಿಸಿದ್ದಾರೆ.

ಅಕ್ಕಪಕ್ಕದ ಕೆಲವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿದರು. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಘಟನೆಯ ನಂತರ ಆರೋಪಿ ನಿದ್ರಾ ಮಾತ್ರೆಗಳನ್ನು ಅಧಿಕ ಪ್ರಮಾಣದಲ್ಲಿ ಸೇವಿಸಿದ್ದ ಎನ್ನಲಾಗಿದೆ. ಆತನನ್ನು ಸಂಬಂಧಿಕರು ಆಸ್ಪತ್ರೆಗೆ ದಾಖಲಿಸಿದ್ದು, ಇನ್ನೂ ಬಂಧಿಸಲಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಸೋಮವಾರ ಪ್ರಕರಣ ದಾಖಲಿಸಲಾಗಿದೆ.

ಪ್ರಮುಖ ಸುದ್ದಿ :-   3 ವರ್ಷದ ಮಗುವನ್ನು ಕಾರಿನಲ್ಲೇ ಮರೆತು ಮದುವೆಗೆ ಹೋದ ದಂಪತಿ ; ಉಸಿರುಗಟ್ಟಿ ಪುಟ್ಟ ಬಾಲಕಿ ಸಾವು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement