6 ವರ್ಷ ನರೇಂದ್ರ ಮೋದಿ ಅನರ್ಹತೆ : ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರು ವರ್ಷಗಳ ಕಾಲ ಅನರ್ಹಗೊಳಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ.
ಲೋಕಸಭೆ ಚುನಾವಣೆಯಲ್ಲಿ ಧರ್ಮ ದೇವತೆಗಳು ಮತ್ತು ಆರಾಧನಾ ಸ್ಥಳದ ಹೆಸರಿನಲ್ಲಿ ಬಿಜೆಪಿ ಪರವಾಗಿ ಮತಯಾಚನೆ ಮಾಡಿದ ಆರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರು ವರ್ಷ ಚುನಾವಣೆಯಿಂದ ಅನರ್ಹಗೊಳಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.
ಧರ್ಮ ಮತ್ತು ದೇವರ ಹೆಸರನ್ನು ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಮತ ಯಾಚನೆ ಮಾಡಿದ್ದಾರೆ. ಹೀಗಾಗಿ ಅವರನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅನರ್ಹಗೊಳಿಸಬೇಕು ಕೋರಿರುವ ಅರ್ಜಿಯು ಸಂಪೂರ್ಣವಾಗಿ ತಪ್ಪು ಗ್ರಹಿಕೆಯಿಂದ ಕೂಡಿದೆ ಎಂದು ಹೇಳಿ ವಕೀಲ ಆನಂದ ಎಸ್ ಜೊಂಧಾಲೆ ಅವರ ಮನವಿಯನ್ನು ನ್ಯಾಯಮೂರ್ತಿ ಸಚಿನ್ ದತ್ತಾ ತಿರಸ್ಕರಿದರು.

ಹಿಂದೂ ದೇವರು ಮತ್ತು ಪೂಜಾ ಸ್ಥಳಗಳು ಮಾತ್ರವಲ್ಲದೆ, ಸಿಖ್ ದೇವರ ಹೆಸರನ್ನೂ ಮೋದಿ ಅವರು ಬಳಸಿಕೊಂಡಿದ್ದಾರೆ, ಎಂದು ವಕೀಲ ಆನಂದ್ ಎಸ್ ಜೊಂಧಾಲೆ ಆರೋಪಿಸಿದ್ದರು.
ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರು ಪೂರ್ವ ಕಲ್ಪನೆ ಮಾಡಿಕೊಂಡಿದ್ದು, ಈ ಅರ್ಜಿಯು ಸಂಪೂರ್ಣವಾಗಿ ತಪ್ಪು ಗ್ರಹಿಕೆಯಿಂದ ಕೂಡಿದೆ. ನ್ಯಾಯಮೂರ್ತಿ ಸಚಿನ್ ದತ್ತಾ ಅವರು ಈ ಮನವಿಯನ್ನು ಸಂಪೂರ್ಣವಾಗಿ ತಪ್ಪಾಗಿ ಗ್ರಹಿಸಲಾಗಿದೆ. ನಿರ್ದಿಷ್ಟ ರೀತಿಯಲ್ಲಿ ಕಾರ್ಯನಿರ್ವಹಿಸಲು ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ನಿರ್ದೇಶಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ದತ್ತಾ ಹೇಳಿದರು.
ಜೊಂಧಾಲೆ ಅವರ ದೂರನ್ನು ಕಾನೂನಿಗೆ ಅನುಗುಣವಾಗಿ ಪರಿಶೀಲಿಸಲಾಗುವುದು ಎಂದು, ಚುನಾವಣಾ ಆಯೋಗದ (ಇಸಿಐ) ಪರ ಹಾಜರಾಗಿದ್ದ ವಕೀಲ ಸಿದ್ಧಾಂತ ಕುಮಾರರ್ ಅವರ ಹೇಳಿಕೆಯನ್ನು ನ್ಯಾಯಾಲಯ ಪರಿಗಣನೆಗೆ ತೆಗೆದುಕೊಂಡಿತು.

ಪ್ರಮುಖ ಸುದ್ದಿ :-   ಸಿದ್ದಾಪುರ : ಸಿಡಿಲು ಬಡಿದು 7 ಹಸುಗಳು ಸಾವು

ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರು ಮೊದಲೇ ಭಾವಿಸುತ್ತಾರೆ ಆದರೆ ಈ ಪೂರ್ವಭಾವನೆಯು ಸಂಪೂರ್ಣವಾಗಿ ನ್ಯಾಯಸಮ್ಮತವಲ್ಲ ಎಂದು ನ್ಯಾಯಾಲಯ ಹೇಳಿದೆ. ಪ್ರಸ್ತುತ ಅರ್ಜಿಯನ್ನು ಅರ್ಹತೆ ಇಲ್ಲದಿರುವುದರಿಂದ ವಜಾಗೊಳಿಸಲಾಗಿದೆ ಎಂದು ನ್ಯಾಯಮೂರ್ತಿ ದತ್ತಾ ತೀರ್ಮಾನಿಸಿದ್ದಾರೆ.
ಏಪ್ರಿಲ್ 9 ರಂದು ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ಮೋದಿ ಅವರು ಮಾಡಿದ ಭಾಷಣವನ್ನು ಉಲ್ಲೇಖಿಸಿ ವಕೀಲ ಆನಂದ ಎಸ್. ಜೊಂಧಲೆ ಸಲ್ಲಿಸಿದ ಅರ್ಜಿಯಲ್ಲಿ ಪ್ರಧಾನಿ “ಹಿಂದೂ ಮತ್ತು ಸಿಖ್ ದೇವತೆಗಳು ಮತ್ತು ಅವರ ಆರಾಧನಾ ಸ್ಥಳಗಳ ಹೆಸರಿನಲ್ಲಿ ಮತ ಕೇಳಿದ್ದಾರೆ. ಹೀಗಾಗಿ ಜನಪ್ರತಿನಿಧಿಗಳ ಕಾಯ್ದೆ ಅಡಿ ಪ್ರಧಾನಿ ಮೋದಿ ಅವರನ್ನು ಆರು ವರ್ಷ ಅನರ್ಹಗೊಳಿಸಬೇಕು ಎಂದು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಜೊಂಧಾಲೆ ಕೋರಿದ್ದರು. ಅಲ್ಲದೆ, ಧರ್ಮ ದೇವರುಗಳು ಮತ್ತು ಪೂಜಾ ಸ್ಥಳಗಳ ಹೆಸರಿನಲ್ಲಿ ಅವರು ಮತ ಯಾಚನೆ ಮಾಡದಂತೆ ನಿರ್ಬಂಧಿಸಲು ಆದೇಶಿಸುವಂತೆ ಸಹ ಮನವಿ ಮಾಡಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement