ಕರ್ನಾಟಕದಲ್ಲಿ ಶನಿವಾರ 1,857 ಹೊಸ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಶನಿವಾರ (ಜುಲೈ 24) ಹೊಸದಾಗಿ 1,857 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,93,556 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 29 ಸಾವು ಸಂಭವಿಸಿದೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36352 ಜನರ ಸಾವು ಸಂಭವಿಸಿದೆ. ರಾಜ್ಯದಲ್ಲಿ 23,905 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಲ್ಲಿ ಇಂದು ಒಂದೇ ದಿನ 551 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ನಗರದಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,24,595 ಕ್ಕೆ ಏರಿಕೆಯಾಗಿದೆ. 12,24,595 ಸೋಂಕಿತರ ಪೈಕಿ 12,00,419 ಜನರು ಗುಣಮುಖ ಆಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿಗೆ 9 ಜನ ಮೃತಪಟ್ಟಿದ್ದಾರೆ. ಅದರಂತೆ, ಕೊರೊನಾದಿಂದ ಈವರೆಗೆ 15,829 ಜನ ಮೃತಪಟ್ಟಿದ್ದಾರೆ. 8,346 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೊಡಲಾಗಿದೆ.

24-07-2021 HMB Kannada

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement