ಎಸ್‌ಟಿಗೆ ಸೇರಿಸಲು ಒತ್ತಾಯಿಸಿ ಕುರುಬರ ಬಲಪ್ರದರ್ಶನ

ಬೆಂಗಳೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಸೇರಿಸುವಂತೆ ಆಗ್ರಹಿಸಿ ಕಾಗಿನೆಲೆ ಕನಕ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ರಾಜಧಾನಿಯಲ್ಲಿ ಕುರುಬ ಸಮುದಾಯದವರ ಬಲಪ್ರದರ್ಶನ ನಡೆಯಿತು.
ಬೆಂಗಳೂರು ಹೊರವಲಯದ ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆದ ಸಮಾವೇಶದಲ್ಲಿ ಸಚಿವರಾದ ಕೆಎಸ್ ಈಶ್ವರಪ್ಪ, ಬೈರತಿ ಬಸವರಾಜ, ಎಂ ಟಿ ಬಿ ನಾಗರಾಜ್, ಆರ್. ಶಂಕರ್ ಸೇರಿದಂತೆ ಕಾಂಗ್ರೆಸ್ ಬಿಜೆಪಿ ಮತ್ತು ಜೆಡಿಎಸ್ ಶಾಸಕರು, ವಿವಿಧ ಸ್ವಾಮೀಜಿಗಳು ಸೇರಿದಂತೆ ಹಲವು ನಾಯಕರು ಪಾಲ್ಗೊಂಡರು.
ಪಾದಯಾತ್ರೆ ಮೂಲಕ ರಾಜ್ಯದ ಉದ್ದಗಲಕ್ಕೂ ಸಂಚರಿಸಿ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತು ಜನಜಾಗೃತಿ ಮೂಡಿಸಿದ್ದ ಸ್ವಾಮೀಜಿಗಳು ಮತ್ತು ರಾಜಕೀಯ ನಾಯಕರು, ರವಿವಾರ ಬೃಹತ್ ಸಮಾವೇಶ ನಡೆಸುವ ಮೂಲಕ ಹಕ್ಕೊತ್ತಾಯ ಮಂಡಿಸಿದರು. ಜನವರಿ ೧೫ರಂದು ಆರಂಭಗೊಂಡ ಪಾದಯಾತ್ರೆ ಬೆಂಗಳೂರಿನಲ್ಲಿ ಕೊನೆಗೊಂಡಿತು. ಪಾದಯಾತ್ರೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್‌.ಈಶ್ವರಪ್ಪ ಸೇರಿದಂತೆ ಸಮುದಾಯದ ವಿವಿಧ ಪಕ್ಷಗಳ ಮುಖಂಡರು ಪಾಲ್ಗೊಂಡಿದ್ದರು.

ಜನವರಿ 15 ರಂದು ಆರಂಭವಾದ ಪಾದಯಾತ್ರೆ ಬೆಂಗಳೂರಿನಲ್ಲಿ ಸಂಪನ್ನಗೊಂಡಿದೆ. ಬಿಐಇಸಿ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಸ್ವಾಮೀಜಿಗಳು, ರಾಜಕೀಯ ನಾಯಕರು ಕುರುಬ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಆಗ್ರಹಿಸಿದರು.

ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತು ಜನಜಾಗೃತಿ ಮೂಡಿಸಿದ್ದ ಸ್ವಾಮೀಜಿಗಳು ಮತ್ತು ರಾಜಕೀಯ ನಾಯಕರು ಭಾನುವಾರ ನಡೆದ ಬೃಹತ್ ಸಮಾರೋಪ ಸಮಾವೇಶದ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಪ್ರಬಲ ಹಕ್ಕೊತ್ತಾಯ ಮಂಡಿಸಿದರು.

ಪರಿಶಿಷ್ಟ ಪಂಗಡದ ಸೌಲಭ್ಯ ಪಡೆಯುವಲ್ಲಿ ಯಶಸ್ವಿಯಾಗುತ್ತೇವೆ.ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುತ್ತೇವೆ. ಸ್ವಾಮೀಜಿಗಳ ನೇತೃತ್ವದಲ್ಲಿನ ಪಾದಯಾತ್ರೆ ಖಂಡಿತ ಫಲ ನೀಡಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಟ್ವೀಟ್ ಮಾಡಿದ್ದಾರೆ.ರಾಜ್ಯದಲ್ಲಿ ಕುರುಬ ಸಮುದಾಯ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದಿದ್ದು ಸಮುದಾಯದ ಅಭಿವೃದ್ಧಿ ಮತ್ತು ಬೆಳವಣಿಗೆ ದೃಷ್ಟಿಯಿಂದ ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಮೂಲಕ ಮೀಸಲಾತಿ ಕಲ್ಪಿಸಲು ಕ್ರಮ ಕೈಗೊಳ್ಳಬೇಕೆಂದು ಮುಖಂಡರು ಒತ್ತಾಯಿಸಿದರು. ಸರಕಾರ ಸ್ಪಂದಿಸದಿದ್ದರೆ ಮತ್ತೆ ಹೋರಾಟ ಮುಂದುವರೆಸಲು ನಿರ್ಧರಿಸಲಾಯಿತು.

ಪ್ರಮುಖ ಸುದ್ದಿ :-   ಸಿದ್ದಾಪುರ : ಸಿಡಿಲು ಬಡಿದು 7 ಹಸುಗಳು ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement