ಯುಗಾದಿಗೆ ಕೆಎಸ್‌ಆರ್‌ಟಿಸಿಯಿಂದ 600 ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ.. ಯಾವ್ಯಾವ ಊರಿಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ಬೇರೆ ಊರಿಗೆ ತೆರಳುವವರಿಗೆ ಹೋಗುವವರಿಗೆ ಕೆಎಸ್‌ಆರ್‌ಟಿಸಿ ಸಂಸ್ಥೆ ರಾಜ್ಯದ ನಾನಾ ಭಾಗಗಳಿಗೆ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲು ನಿರ್ಧರಿಸಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು(ಕೆಎಸ್‌ಆರ್‌ಟಿಸಿ) ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಏ.1 ಮತ್ತು ಏ.2ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಪ್ರದೇಶಗಳಿಗೆ ಹಾಗೂ ಹೊರ ರಾಜ್ಯದ ಬೇರೆಬೇರೆ ಪ್ರದೇಶಗಳಿಗೆ ಹೆಚ್ಚುವರಿಯಾಗಿ 600 ಬಸ್‌ಗಳನ್ನು ಕಾರ್ಯಾಚರಣೆಗೊಳಿಸುತ್ತಿದೆ. ಅಲ್ಲದೆ ಏ.3ರಂದು ರಾಜ್ಯದ ವಿವಿಧ ಭಾಗಗಳಿಂದ ಮತ್ತು ಹೊರ ರಾಜ್ಯಗಳ ನಾನಾ ಭಾಗಗಳಿಂದ ಬೆಂಗಳೂರಿಗೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

ಮೈಸೂರು ರಸ್ತೆಯ ಸ್ಯಾಟಲೈಟ್‌ ನಿಲ್ದಾಣದಿಂದಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಬಸ್‌ಗಳು ಓಡಲಿವೆ.
ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌, ತಿರುಪತಿ, ವಿಜಯವಾಡ, ಹೈದರಾಬಾದ್‌ಗೆ ಹೆಚ್ಚುವರಿ ಬಸ್‌ಗಳು ಓಡಲಿವೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

ವಿಜಯನಗರ, ಜಯನಗರ 4ನೇ ಬ್ಲಾಕ್‌, ಜಾಲಹಳ್ಳಿ ಕ್ರಾಸ್‌, ನವರಂಗ್‌, ಮಲ್ಲೇಶ್ವರ 18ನೇ ಅಡ್ಡರಸ್ತೆ, ಬನಶಂಕರಿ, ಜೀವನ್‌ಬಿಮಾನಗರ, ಐಟಿಐ ಗೇಟ್‌, ಗಂಗಾನಗರ, ಕೆಂಗೇರಿ ಉಪನಗರದಿಂದ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಶಿವಮೊಗ್ಗ, ದಾವಣಗೆರೆ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಬಸ್‌ ಸೇವೆ ಒದಗಿಸಲಾಗುತ್ತಿದೆ.
ಶಾಂತಿನಗರ ಬಸ್‌ ನಿಲ್ದಾಣದಿಂದ ಚೆನ್ನೈ, ಮದುರೈ, ಕುಂಬಕೋಣಂ, ಕೊಯಮತ್ತೂರು, ತಿರುಚಿ, ಪಾಲಕ್ಕಾಡ್‌, ತ್ರಿಶೂರ್‌, ಎರ್ನಾಕುಂ, ಕಲ್ಲಿಕೋಟೆ ಮಾರ್ಗದ ಬಸ್‌ಗಳು ಕಾರ್ಯಾಚರಣೆಗೊಳ್ಳಲಿವೆ.

www.ksrtc.gov.in ನಲ್ಲಿ ಆನ್‌ಲೈನ್‌ನಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡಬಹುದು. ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಿಗೆ ಕಾಯ್ದಿರಿಸಿದರೆ ಶೇಕಡಾ 5 ರಷ್ಟು ರಿಯಾಯಿತಿ ನೀಡಲಾಗುವುದು. ಅವರು ತೆರಳುವ ಹಾಗೂ ಹಿಂತಿರುಗುವ ಪ್ರಯಾಣಕ್ಕೆ ಬುಕ್ ಮಾಡಿದರೆ, ಶೇಕಡಾ 10 ರಷ್ಟು ರಿಯಾಯಿತಿಯನ್ನು ನೀಡಲಾಗುತ್ತದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement