ಮೈಸೂರು : ಭಾನುವಾರ ಮುಂಜಾನೆ ಖಾಸಗಿ ಜಮೀನಿನಲ್ಲಿ ನಡೆದ ರೇವ್ ಪಾರ್ಟಿಯ ಮೇಲೆ ಮೈಸೂರು ಪೊಲೀಸರು ದಾಳಿ ನಡೆಸಿದ್ದಾರೆ. ೫೦ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದು, ಹಲವು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಪೊಲೀಸರು ಸ್ಥಳದಲ್ಲಿದ್ದಾರೆ ಎಂದು ತಿಳಿದಾಗ ಪಾರ್ಟಿಯಲ್ಲಿದ್ದ ಹಲವರು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಅಲ್ಲಿದ್ದ ಎಲ್ಲರ ರಕ್ತದ ಮಾದರಿ ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಪರೀಕ್ಷೆಗೆ ಕಳುಹಿಸಿದ್ದು, ಪಾರ್ಟಿ ನಡೆದ ಸ್ಥಳಕ್ಕೆ ಎಫ್‌ಎಸ್‌ಎಲ್ ತಂಡ ಭೇಟಿ ನೀಡಿದ್ದ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಕಸ್ಟಡಿಯಲ್ಲಿ ಕುಳಿತಿರುವ ಆರೋಪಿಗಳು ತಮ್ಮ ಮುಖವನ್ನು ಮರೆಮಾಚಲು ಪ್ರಯತ್ನಿಸುತ್ತಿರುವುದನ್ನು ತೋರಿಸಿರುವ ವೀಡಿಯೊ ಹೊರಬಿದ್ದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಪೊಲೀಸ್ ವರಿಷ್ಠಾಧಿಕಾರಿ ದಾಳಿಯ ಮಾಹಿತಿ ನೀಡಿದ್ದಾರೆ ಎನ್ನಲಾಗಿದ್ದು, ಅವರು ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ