ನನ್ನನ್ನು ರಾಜಕೀಯವಾಗಿ ಮುಗಿಸಲು ದೊಡ್ಡ ಪಿತೂರಿ ನಡೆಯುತ್ತಿದೆ : ಡಿ.ಕೆ.ಶಿವಕುಮಾರ

ಬೆಂಗಳೂರು : ನನ್ನನ್ನು ರಾಜಕೀಯವಾಗಿ ಮುಗಿಸಬೇಕು ಎಂದು ದೊಡ್ಡ ಷಡ್ಯಂತ್ರ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ದೊಡ್ಡ ಪಿತೂರಿ ನಡೆಯುತ್ತಿದೆ. ಸರ್ಕಾರ ಈಗಾಗಲೇ ಕೇಸ್ ವಿತ್‍ಡ್ರಾ ಮಾಡಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನೋಟಿಸ್ ನೀಡಿದೆ. ಪ್ರಕರಣದ ತನಿಖೆಗೆ ನೀಡಿದ ಅನುಮತಿಯನ್ನು ರಾಜ್ಯ ಸರ್ಕಾರ ಹಿಂಪಡೆದ ನಂತರವೂ ನೋಟಿಸ್ ನೀಡಲಾಗಿದೆ ಎಂದು ಹೇಳಿದರು.

ನನಗೆ ನೊಟೀಸ್ ಬಂದಿಲ್ಲ, ನನ್ನ ಸಂಸ್ಥೆಗೆ ಬಂದಿದೆ. ಹೆಂಡತಿ, ಮಕ್ಕಳ ವಿಚಾರಕ್ಕೆಲ್ಲ ಬಂದಿದೆ. ಅವರಿಗೆ ನನ್ನನ್ನು ಒಳಗೆ ಹಾಕುವ ಆಸಕ್ತಿ ಇದ್ದರೆ ಹಾಕಿಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನನ್ನ ಮೇಲೆ ದೌರ್ಜನ್ಯ ನಡೆಸಿ ಹಾಗೂ ನನ್ನನ್ನು ರಾಜಕೀಯವಾಗಿ ಮುಗಿಸಬೇಕೆಂದು ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಇದರಲ್ಲಿ ದೊಡ್ಡ ದೊಡ್ಡವರಿದ್ದಾರೆ, ನಾನು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ಯಾವುದಕ್ಕೂ ಹೆದರಲ್ಲ ಎಂದರು. ಸರ್ಕಾರ ಇದನ್ನ ಈಗಾಗಲೇ ಲೋಕಾಯುಕ್ತಕ್ಕೆ ಕೊಟ್ಟಿದೆ. ಮುಂದಿನ ಪ್ರಕ್ರಿಯೆಯನ್ನು ಲೋಕಾಯುಕ್ತ ನೋಡಿಕೊಳ್ಳುತ್ತದೆ ಎಂದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement