ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಗುರುವಾರ ಚಂಡೀಗಢ-ದಿಬ್ರುಗಢ ಎಕ್ಸ್ಪ್ರೆಸ್ನ ಹಲವು ಬೋಗಿಗಳು ಹಳಿತಪ್ಪಿದ ಪರಿಣಾಮ ಕನಿಷ್ಠ ನಾಲ್ವರು ಪ್ರಯಾಣಿಕರು ಸಾವಿಗೀಡಾಗಿದ್ದಾರೆ ಹಾಗೂ ೨೦ ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪೊಲೀಸರ ಪ್ರಕಾರ, ದಿಬ್ರುಗಢಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲಿನ ಕೆಲವು ಬೋಗಿಗಳು ಮೋತಿಗಂಜ್ ಮತ್ತು ಜಿಲಾಹಿ ರೈಲು ನಿಲ್ದಾಣಗಳ ನಡುವೆ ಹಳಿತಪ್ಪಿದವು. ಹಿರಿಯ ರೈಲ್ವೇ ಮತ್ತು ಸ್ಥಳೀಯ ಆಡಳಿತ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆಗೆ ಸ್ಥಳದಲ್ಲಿದ್ದಾರೆ.
ಹಳಿತಪ್ಪಿದ ನಂತರ ಕನಿಷ್ಠ 13 ರೈಲುಗಳನ್ನು ಬೇರೆಡೆಗೆ ತಿರುಗಿಸಲಾಗಿದೆ ಮತ್ತು ಎರಡನ್ನು ರದ್ದುಗೊಳಿಸಲಾಗಿದೆ.
ಆಡಳಿತವು ಗೊಂಡಾದಿಂದ ರಕ್ಷಣಾ ತಂಡವನ್ನು ಕಳುಹಿಸಿತು. ಈಶಾನ್ಯ ರೈಲ್ವೆಯ CPRO ಪಂಕಜ್ ಸಿಂಗ್ ಅವರು, “…ರೈಲ್ವೆಯ ವೈದ್ಯಕೀಯ ವ್ಯಾನ್ ಸ್ಥಳಕ್ಕೆ ತಲುಪಿದೆ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಸಹಾಯವಾಣಿ ಸಂಖ್ಯೆಗಳನ್ನು ನೀಡಲಾಗಿದೆ. ಇದು ಮಧ್ಯಾಹ್ನ 2:37 ರ ಸುಮಾರಿಗೆ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯಂತೆ, 4-5 ಬೋಗಿಗಳು ಹಳಿತಪ್ಪಿತು…” ಎಂದು ಹೇಳಿದ್ದಾರೆ.
40 ಸದಸ್ಯರ ವೈದ್ಯಕೀಯ ತಂಡ ಮತ್ತು 15 ಆಂಬ್ಯುಲೆನ್ಸ್ಗಳು ಸ್ಥಳದಲ್ಲಿದ್ದು, ಹೆಚ್ಚಿನ ವೈದ್ಯಕೀಯ ತಂಡಗಳು ಮತ್ತು ಆಂಬ್ಯುಲೆನ್ಸ್ಗಳನ್ನು ಅಲ್ಲಿಗೆ ಧಾವಿಸಲಾಗುತ್ತಿದೆ ಎಂದು ಉತ್ತರ ಪ್ರದೇಶ ಪರಿಹಾರ ಆಯುಕ್ತ ಜಿ.ಎಸ್.ನವೀನಕುಮಾರ ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ