ಬೆಂಗಳೂರು: ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2021-22ನೇ ಸಾಲಿನ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ.
ಫೆಬ್ರವರಿ 21ರಿಂದ 26ರ ವರೆಗೆ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿದ್ದು, ನಿಗದಿತ ದಿನದಂದು ಪರೀಕ್ಷೆ ಬೆಳಿಗ್ಗೆ 10:30ಕ್ಕೆ ಪರೀಕ್ಷೆ ಆರಂಭವಾಗಲಿದೆ. ಕೋವಿಡ್ ನಿಯಮಗಳ ಅನುಸಾರವಾಗಿ ಪರೀಕ್ಷೆ ನಡೆಸಲು ಸೂಚಿಸಲಾಗಿದೆ.
ಫೆಬ್ರವರಿ 2022ರ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯವೇಳಾಪಟ್ಟಿ ಈ ಕೆಳಗಿನಂತಿದೆ.
*ಫೆಬ್ರವರಿ 21: ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಹಾಗೂ ಸಂಸ್ಕೃತ
*ಫೆ.22: ಸಮಾಜ ವಿಜ್ಞಾನ
*ಫೆ.23: ದ್ವಿತೀಯ ಭಾಷೆ ಇಂಗ್ಲಿಷ್ ಹಾಗೂ ಕನ್ನಡ
ಫೆ.24: ಗಣಿತ
ಫೆ.25: ತೃತೀಯ ಭಾಷೆಯಾಗಿ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು
ಫೆ.26ರಂದು ವಿಜ್ಞಾನ
ನಿಮ್ಮ ಕಾಮೆಂಟ್ ಬರೆಯಿರಿ