ಬಿಡದಿಯ ಕಾರ್ಖಾನೆಯಲ್ಲಿ ಪಾಕಿಸ್ತಾನ ಪರ ಬರಹ; ಇಬ್ಬರ ಬಂಧನ

ರಾಮನಗರ : ವ ಬಿಡದಿಯಲ್ಲಿರುವ ಟೊಯೋಟಾ ಬೋಷೂಕೂ ಆಟೋಮೇಟಿವ್ ಇಂಡಿಯಾ ಕಂಪನಿಯ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಿಡದಿಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಹೈಮದ್ ಹುಸೇನ್ (24) ಮತ್ತು ಸಾದಿಕ್ (20) ಎಂಬವರು ಬಂಧಿತ ಆರೋಪಿಗಳು. ಇವರು ಟೊಯೋಟಾ ಕಾರ್ಖಾನೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಶೌಚಾಲಯದ ಗೋಡೆ ಮೇಲೆ ಪಾಕಿಸ್ತಾನದ ಪರ ಬರಹ ಬರೆಯುವುದರ ಜತೆಗೆ ಕನ್ನಡಿಗರ ಬಗ್ಗೆಯೂ ಅವಹೇಳನಕಾರಿ ಪದ ಬಳಸಿದ್ದರು. ದೇಶದ್ರೋಹದ ಆರೋಪದಡಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕಾರ್ಖಾನೆಯ ಶೌಚಾಲಯದ ಗೋಡೆ ಮೇಲೆ ಪಾಕಿಸ್ತಾನ ಕೀ ಜೈ, ಪಾಕಿಸ್ತಾನಕ್ಕೆ ಜಯವಾಗಲಿ ಎಂದು ಬರೆಯಲಾಗಿತ್ತು.
ಈ ಕಾರ್ಖಾನೆಯಲ್ಲಿ 2 ಸಾವಿರಕ್ಕೂ ಹೆಚ್ಚು ಕಾರ್ಮಿಕರಿದ್ದು, ಮೂರು ಪಾಳಿಗಳಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. . ಇವರ ಬರಹದ ಫೋಟೋ ವೈರಲ್ ಆದ ನಂತರ ಬಿಡದಿ ಪೋಲಿಸರು ಭೇಟಿ ನೀಡಿ ಪರಿಶೀಲಿಸಿದ್ದರು ಹಾಗೂಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದರು.
ಕನ್ನಡಪರ ಸಂಘಟನೆಗಳು ಕಾರ್ಖಾನೆ ಬಳಿ ಜಮಾಯಿಸಿ ಪ್ರತಿಭಟನೆ ನಡೆಸಿ ಕಂಪನಿಯ ಆಡಳಿತ ಮಂಡಳಿ ವಿರುದ್ದ ಘೋಷಣೆ ಕೂಗಿದ್ದರು. ದೇಶದ್ರೋಹಿ ಪದ ಬಳಸಿದ ಹಾಗೂ ಕನ್ನಡಿಗರನ್ನು ನಿಂದಿಸಿರುವ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದರು.

ಪ್ರಮುಖ ಸುದ್ದಿ :-   ಶಾಸಕ ಸ್ಥಾನದಿಂದ ಅನರ್ಹಗೊಂಡ ಜನಾರ್ದನ ರೆಡ್ಡಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement