ವಿಧಾನ ಪರಿಷತ್ ಉಪಸಭಾಪತಿಯಾಗಿ ಎಂ.ಕೆ ಪ್ರಾಣೇಶ ಆಯ್ಕೆ

ಬೆಳಗಾವಿ: ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿಯಾಗಿ ಬಿಜೆಪಿಯ ಎಂ.ಕೆ. ಪ್ರಾಣೇಶ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್‌ನಿಂದ ಅನಿಲಕುಮಾರ ಅರಳಿ ಅವರು ಸ್ಪರ್ಧಿಸಿದ್ದರು.
ಇಂದು (ಡಿಸೆಂಬರ್ 23) ರಂದು 11 ಗಂಟೆಗೆ ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ನಡೆದಿದ್ದು, ಎಂ.ಕೆ ಪ್ರಾಣೇಶ್ 39 ಮತಗಳನ್ನು ಪಡೆಯುವ ಮೂಲಕ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.ಬಿಜೆಪಿ ಅಗತ್ಯ ಸಂಖ್ಯಾಬಲ(39) ಹೊಂದಿದ್ದರೂ ಅಡ್ಡಮತದ ಭೀತಿಯಿಂದ ವಿಪ್ ಜಾರಿ ಮಾಡಿತ್ತು. ಜೆಡಿಎಸ್ ಈ ಚುನಾವಣೆಯಲ್ಲಿ ತಟಸ್ಥ ನಿಲುವು ತಳೆದಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಕೇವಲ 26 ಮತಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಪ್ರಾಣೇಶ್ ಉಪ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.
ಪ್ರಾಣೇಶ ಅವರು 1989 ರಿಂದ ಬಿಜೆಪಿ ಸದಸ್ಯರಾಗಿದ್ದಾರೆ. ಪ್ರಾಣೇಶ ಅವರು 2021 ರಲ್ಲಿ ನಡೆದ ಉಪ ಸಭಾಪತಿ ಚುನಾವಣೆಯಲ್ಲಿ ಸ್ಪರ್ಧಿಸಿ ಕಾಂಗ್ರೆಸ್ ಪಕ್ಷದ ಕೆ.ಸಿ. ಕೊಂಡಯ್ಯ ಅವರನ್ನು ಸೋಲಿಸಿ ಆಯ್ಕೆಯಾಗಿದ್ದರು. ಇದೀಗ ಮತ್ತೊಮ್ಮೆ ಆಯ್ಕೆಯಾಗಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement