ಬೆಂಗಳೂರು : ಮಾಜಿ ಸಚಿವ ಆರ್. ವಿ. ದೇಶಪಾಂಡೆಗೂ ಕೊರೊನಾ ಸೋಂಕು ದೃಢಪಟ್ಟಿದೆ. ಹೀಗಾಗಿ ಅವರು ಮನೆ ಪ್ರತ್ಯೇಕತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಸ್ವತಃ ಟ್ವಿಟ್ ಮಾಡಿರುವ ಅವರು, ನನಗೂ ಕೊರೊನಾ ಸೊಂಕು ತಗುಲಿದೆ ಎಂಬುದಾಗಿ ಪರೀಕ್ಷೆಯಿಂದ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಕಳೆದ ಕಲೆ ದಿನಗಳಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೊರೊನಾ ಸೋಂಕಿನ ಪರೀಕ್ಷೆಗೆ ಒಳಪಟ್ಟು, ಲಕ್ಷಣಗಳಿದ್ದರೆ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯಬೇಕು ಎಂದು ಮಾಜಿ ಸಚಿವ ದೇಶಪಾಂಡೆ ಕೋರಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ