ಡಿಸಿಎಂ ಗೋವಿಂದ ಕಾರಜೋಳಗೆ ಕೊರೊನಾ ಸೋಂಕು

ಬೆಂಗಳೂರು: ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ
. ಈ ಕುರಿತು ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಗೋವಿಂದ ಕಾರಜೋಳ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದರು. ಏಪ್ರಿಲ್ 10 ಮತ್ತು 11ರಂದು ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ ಪ್ರಚಾರ ನಡೆಸಬೇಕಿತ್ತು. ಆದರೆ, ಕೋವಿಡ್ ಸೋಂಕು ತಗುಲಿರುವ ಹಿನ್ನಲೆಯಲ್ಲಿ ಕಳೆದ ಎರಡು ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನಗಿರುವ ಕೋವಿಡ್ ಸೋಂಕು ಇತರರಿಗೆ ಹರಡಬಾರದೆಂಬ ಕಾರಣಕ್ಕೆ ಪ್ರಚಾರದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಟ್ವೀಟ್‌ನಲ್ಲಿ ಅವರು ಹೇಳಿದ್ದಾರೆ.
ಅನುಭವಿ ವೈದ್ಯರು ನನಗೆ ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯ ಸುಧಾರಿಸುತ್ತಿದೆ. ಮಸ್ಕಿ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಕೊಟ್ಟ ಮಾತನ್ನು ಇಂದಿನ ಸ್ಥಿತಿಯಲ್ಲಿ ಉಳಿಸಿಕೊಳ್ಳಲಾಗಲಿಲ್ಲ. ಇದಕ್ಕಾಗಿ ವಿಷಾದಿಸಿ, ಮತದಾರರ ಕ್ಷಮೆ ಕೋರುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement