ಮಂಗಳೂರು: ಭಾರತ ಫೌಂಡೇಶನ್ ಆಶ್ರಯದಲ್ಲಿ ಫೆಬ್ರವರಿ 18-19 ರಂದು ಎರಡು ದಿನಗಳ ಕಾಲ ಮಂಗಳೂರಿನ ಟಿಎಂಎ ಪೈ ಇಂಟರ್‌ನ್ಯಾಷನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ಮಂಗಳೂರು ಲಿಟ್ ಫೆಸ್ಟ್‌ನ ಐದನೇ ಆವೃತ್ತಿ ಮಂಗಳೂರು ಸಾಹಿತ್ಯ ಸಮ್ಮೇಳನ ನಡೆಯಲಿದೆ. ಎರಡು ದಿನಗಳ ಈ ಸಮ್ಮೇಳನ ʼಭಾರತದ ಪರಿಕಲ್ಪನೆʼ (ʼThe Idea of Bharath) ಎಂಬ ಥೀಮ್‌ನಡಿಯಲ್ಲಿ ನಡೆಯಲಿದೆ.
ಈ ಕುರಿತು ಮಂಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಫೌಂಡೇಶನ್ ಟ್ರಸ್ಟಿ ಸುನಿಲ ಕುಲಕರ್ಣಿ ಅವರು, ಒಟ್ಟು 25 ಸೆಷನ್‌ಗಳ ವಿಚಾರ ಸಂಕಿರಣ ಆಯೋಜಿಸಲಾಗಿದ್ದು, ಇದರಲ್ಲಿ 55 ಕ್ಕೂ ಅಧಿಕ ವಾಗ್ಮಿಗಳು ಭಾಗವಹಿಸಲಿದ್ದಾರೆ. ಪ್ರತಿ ಸೆಷನ್‌ನ ಕೊನೆಗೆ ಸಾಹಿತ್ಯಕ್ಕೆ ಸಂಬಂಧಿಸಿದ ರಸಪ್ರಶ್ನೆ ಕಾರ್ಯಕ್ರಮ ಇರಲಿದ್ದು, ಗೆದ್ದವರಿಗೆ ಪುಸ್ತಕವನ್ನು ಬಹುಮಾನವಾಗಿ ನೀಡಲಾಗುತ್ತದೆ ಎಂದು ತಿಳಿಸಿದರು.
ಸಾಹಿತ್ಯ ಉತ್ಸವದಲ್ಲಿ ಪ್ರತಿ ಸಲವೂ ಒಬ್ಬ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಅಧ್ಯಕ್ಷರಾದ ತುಕಾರಾಮ್ ಪೂಜಾರಿ ಅವರನ್ನು ಈ ಸಲದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು .ಲಿಟ್ ಫೆಸ್ಟ್‌ನಲ್ಲಿ 2 ಸಿನಿಮಾಗಳ ಪ್ರದರ್ಶನ ನಡೆಯಲಿದೆ. 16 ಪುಸ್ತಕ ಮಳಿಗೆಗಳು ಕೂಡ ಇರಲಿವೆ. ಪುಸ್ತಕ ಮಳಿಗೆ, ತುಳು ಅಕ್ಷರ ಕಲಿಕಾ ಕಾರ್ಯಾಗಾರ, ಮಕ್ಕಳ ಸಾಹಿತ್ಯ ಅಭಿರುಚಿ ಮತ್ತು ಕಥೆಯ ಬಗ್ಗೆ ಪಾಲಕರಿಗೆ ಆಸಕ್ತಿ ಬೆಳೆಸುವ ದೃಷ್ಟಿಯಿಂದ ಅವಧಿ, ಲೇಖಕರೊಂದಿಗೆ ಸಂವಾದ – (ಹರಟೆ ಕಟ್ಟೆ) ಈ ಬಾರಿಯ ಲಿಟ್ ಫೆಸ್ಟ್‌ನ ವಿಶೇಷತೆಯಾಗಿದೆ ಎಂದು ಅವರು ಹೇಳಿದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಆರ್. ಜಗ್ನನಾಥ, ವಿನಯ್ ಹೆಗ್ಡೆ, ವಿ. ನಾಗರಾಜ್ ಭಾಗಿಯಾಗಲಿದ್ದಾರೆ.
ಉದ್ಘಾಟನಾ ಸೆಶನ್ The Idea of Bharath In Amrithkal: Reclaiming The Right Path-The Way Forward ಎಂಬ ಪರಿಕಲ್ಪನೆಯ ಅಡಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಿನೆಮಾ ನಿರ್ದೇಶಕ, ರಿಷಭ್ ಶೆಟ್ಟಿ, ಪ್ರಕಾಶ್ ಬೆಳವಾಡಿ, ಸ್ಮಿತಾ ಪ್ರಕಾಶ್, ಶಿವ ಅರೂರ್, ಅಜಿತ್ ಹನಮಕ್ಕನವರ್, ಅಡ್ಡಂಡ ಕಾರ್ಯಪ್ಪ, ಬಸುಮ ಕೊಡಗು, ದಕ್ಕುಲ ಮುನಿಸ್ವಾಮಿ ಸೇರಿದಂತೆ ಅನೇಕ ವಾಗ್ಮಿಗಳು, ಸಾಹಿತಿಗಳು, ಸಂಶೋಧಕರು, ವಿಷಯ ಪರಿಣಿತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
-
Pingback: Pre Event Press meet Media Reports 15-02-2023 - Mangaluru