ಗೋಕರ್ಣ: ದೇಶದ ಅನೇಕ ಯೋಜನೆಗಳಿಗೆ ತ್ಯಾಗ ಮಾಡಿದ ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತವಾದ ಮಲ್ಟಿ ಸ್ಪಶಾಲಿಟಿ ಆಸ್ಪತ್ರೆ ಆರಂಭಕ್ಕೆ ತಕ್ಷಣವೇ ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಶ್ರೀ ರಾಮಚಂದ್ರಾಪುರ ಮಠದ ಮಠಾಧೀಶರಾದ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಉತ್ತರ ಕನ್ನಡ ಜಿಲ್ಲೆ ಬಹಳಷ್ಟು ಪ್ರಾಕೃತಿಕ ಸಂಪತ್ತನ್ನು ಹೊಂದಿರುವ ಜಿಲ್ಲೆ. ಉತ್ತರ ಕನ್ನಡ ಜಿಲ್ಲೆ ವಿವಿಧ ಯೋಜನೆಗಳಿಗಾಗಿ ಬಹಳಷ್ಟು ತ್ಯಾಗ ಮಾಡಿದ ಜಿಲ್ಲೆ. ಈ ಯೋಜನೆಯ ಫಲ ರಾಜ್ಯಕ್ಕೆ ಹಾಗೂ ರಾಷ್ಟ್ರಕ್ಕೆ ಸಿಕ್ಕಿದೆ. ಆದರೆ ಯೋಜನೆಯ ಬಿಸಿ ಮಾತ್ರ ಉತ್ತರ ಕನ್ನಡ ಜಿಲ್ಲೆಯ ಜನರಿಗೆ ತಟ್ಟಿದೆ. ಅತ್ಯಂತ ಶ್ರೇಷ್ಠ ಇತಿಹಾಸ ಹಾಗೂ ಪರಂಪರೆ ಇರುವ ಜಿಲ್ಲೆ ದುರದೃಷ್ಟವೆಂದರೆ ರಾಷ್ಟ್ರ ಹಾಗೂ ರಾಜ್ಯಕ್ಕೆ ತ್ಯಾಗ ಮಾಡಿದ ಈ ಜಿಲ್ಲೆಯ ಜನರು ಉತ್ಕೃಷ್ಟ ಆರೋಗ್ಯ ಸೇವೆಯಿಂದ ವಂಚಿತಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಉತ್ತಮ ಆರೋಗ್ಯ ಸೌಲಭ್ಯಕ್ಕಾಗಿ ಈ ಜಿಲ್ಲೆಯ ಜನರು ಬೇರೆಬೇರೆ ಜಿಲ್ಲೆಗಳಿಗೆ ಹೋಗಬೇಕಾಗಿದೆ. ಈ ಜಿಲ್ಲೆಯ ಜನರು ಏನು ತಪ್ಪು ಮಾಡಿದ್ದಾರೆ..? ಯಾಕೆ ಈ ಜಿಲ್ಲೆಯ ಜನರನ್ನು ನಿರ್ಲಕ್ಷಿಸಲಾಗುತ್ತಿದೆ. ಇದು ಎಲ್ಲರೂ ಸೇರಿ ಗಂಭೀರವಾಗಿ ಚಿಂತನೆ ಮಾಡಬೇಕಾದ ವಿಷಯ. ಈ ಜಿಲ್ಲೆಯಲ್ಲಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯ ಅಗತ್ಯ ಮನಗಂಡು ರಾಜ್ಯ ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಎಂದು ಆಗ್ರಹಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ