ಬೆಂಗಳೂರು ಕೋರಮಂಗಲದಲ್ಲಿ ಅಪಘಾತ ; ಶಾಸಕನ ಪುತ್ರ ಸೇರಿ 7 ಜನರ ಸಾವು

ಬೆಂಗಳೂರು: ಬೆಂಗಳೂರು ನಗರದಲ್ಲಿ ತಡರಾತ್ರಿ ಐಷಾರಾಮಿ ಕಾರು ಅಪಘಾತಕ್ಕೀಡಾಗಿ  7 ಜನರು ಮೃತಪಟ್ಟಿದ್ದಾರೆ.

ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಸಮೀಪ ಮಂಗಳವಾರ ಮುಂಜಾನೆ 1.45ರ ಸುಮಾರಿಗೆ ಐಷಾರಾಮಿ ಕಾರು ಅಪಘಾತ ನಡೆದಿದ್ದು, ಮೂವರು ಮಹಿಳೆಯರು, ನಾಲ್ವರು ಪುರುಷರು ಸೇರಿ ಅಪಘಾತದಲ್ಲಿ  ಅಪಘಾತದಲ್ಲಿ   7  ಮಂದಿ ಮೃತಪಟ್ಟಿದ್ದಾರೆ.  ರಸ್ತೆ ಅಪಘಾತದಲ್ಲಿ ಮೃತಪಟ್ಟ ಕರುಣಾಸಾಗರ್ (28) ತಮಿಳುನಾಡಿನ ಹೊಸೂರು ಕ್ಷೇತ್ರದ ಡಿಎಂಕೆ ಶಾಸಕ ವೈ. ಪ್ರಕಾಶ್ ಪುತ್ರ ಎಂದು ತಿಳಿದುಬಂದಿದೆ.

ಮೃತಪಟ್ಟವರನ್ನು ಹೊಸೂರು ಮೂಲದ ಕರುಣಾಸಾಗರ್ (28), ಕರುಣಾ ಸಾಗರ್ ಭಾವಿ ಪತ್ನಿ ಬಿಂದು (28), ಕೇರಳ ಮೂಲದ ಅಕ್ಷಯ್ ಗೋಯಲ್, ಇಶಿತಾ (21), ಡಾ.ಧನುಶಾ (21) ಮತ್ತು ಹುಬ್ಬಳ್ಳಿಯ ರೋಹಿತ್ (23) ಮತ್ತು ಹರ್ಯಾಣದ ಉತ್ಸವ್ ಎಂದು ಗುರುತಿಸಲಾಗಿದೆ.

ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಫುಟ್‌ಪಾತ್ ಹತ್ತಿ ಡಿವೈಡರ್‌ಗೆ ಡಿಕ್ಕಿಯಾಗಿ ನಂತರ  ಪಕ್ಕದ ಗೋಡೆಗೆ ಗುದ್ದಿದೆ. ಅಪಘಾತಕ್ಕೆ ತುತ್ತಾದ ಕಾರು ಕೆಎ 03, ಎಂವೈ 6666 ಎಂಬ ಫ್ಯಾನ್ಸಿ ನಂಬರ್ ಹೊಂದಿದೆ.

ಪ್ರಮುಖ ಸುದ್ದಿ :-   ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ : ತಾಯಿ-ಮಗು ಸಾವು

ಅಪಘಾತದ ರಭಸಕ್ಕೆ  ಕಾರಿನಲ್ಲಿದ್ದ 6 ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದರೆ ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೃತಪಟ್ಟವರೆಲ್ಲರೂ ಸ್ನೇಹಿತರು.

ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತದ ಭೀಕರತೆಗೆ ಕಾರಿನ ಎಡಭಾಗದ ಎರಡು ಟೈರ್‌ಗಳು ಸ್ಫೋಟಗೊಂಡು ರಸ್ತೆಗೆ ಹಾರಿ ಬಿದ್ದಿವೆ.

ಮೃತಪಟ್ಟವರಲ್ಲಿ ಕೆಲವರು ಕೋರಮಂಗಲದ ಜೋಲೋ ಸ್ಟೇ ಪಿಜಿಯಲ್ಲಿ ವಾಸವಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಆಡುಗೋಡಿ ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ. ಅತಿಯಾದ ವೇಗೆವೇ ಘಟನೆಗೆ ಕಾರಣ ಎಂದು ಅಂದಾಜಿಸಲಾಗಿದೆ.

ಕಟ್ಟಡ ನಿರ್ಮಾಣ ಸಾಮಾಗ್ರಿಗಳನ್ನು ಖರೀದಿ ಮಾಡಲು ಸೋಮವಾರ ಸಂಜೆ 5.30ರ ಸುಮಾರಿಗೆ ಬೆಂಗಳೂರಿಗೆ ಕರುಣಾಸಾಗರ್ ಬಂದಿದ್ದರು ಎನ್ನಲಾಗಿದೆ.

ಸೇಂಟ್ ಜಾನ್ಸ್‌ ಆಸ್ಪತ್ರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಭೇಟಿ ನೀಡಿದರು. ಶಾಸಕ ವೈ. ಪ್ರಕಾಶ್‌ ರಾಮಲಿಂಗಾ ರೆಡ್ಡಿಗೆ ಆಪ್ತರು.

ವಿಧಾನಸಭೆ ಅಧಿವೇಶನದಲ್ಲಿ ಪಾಲ್ಗೊಳ್ಳಲು ಚೆನ್ನೈಗೆ ತೆರಳಿದ್ದ ಶಾಸಕ ವೈ. ಪ್ರಕಾಶ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಕರುಣಾಸಾಗರ್ ಪತ್ನಿ ಬಿಂದು ಸಹ ಅಪಘಾತದಲ್ಲಿ ಮೃತಪಟ್ಟಿದ್ದಾರೆ.ಪೊಲೀಸರು ಘಟನೆ ಕುರಿತು ತನಿಖೆ ನಡೆಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ : ಅಪಹರಣ ಪ್ರಕರಣ ದಾಖಲು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement