ಎಸಿಬಿ ರದ್ದು: ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ

ನವದೆಹಲಿ: ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್‌ ರದ್ದು ಮಾಡಿರುವುದನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಕನಕರಾಜು ಎಂಬವರ ಪರವಾಗಿ ವಕೀಲ ಅಶೋಕ ಪಾಣಿಗ್ರಾಹಿ ಅವರು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ, ಸಿ.ಟಿ.ರವಿಕುಮಾರ್ ಪೀಠದ ಎದುರು ಖಾಸಗಿ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯನ್ನು ಆಲಿಸಲು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್‌ ವಿ ರಮಣ, ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಹಾಗೂ ಸಿ ಟಿ ರವಿಕುಮಾr ಅವರಿದ್ದ ಪೀಠ ಒಪ್ಪಿಗೆ ನೀಡಿತು.

ಹಣ ನೀಡುವಂತೆ ಬೇಡಿಕೆ ಸಲ್ಲಿಸಿದ ಬೆಸ್ಕಾಂನ ಇಬ್ಬರು ಅಧಿಕಾರಿಗಳ ವಿರುದ್ಧ ಎಸಿಬಿಯಲ್ಲಿ ದೂರು ಸಲ್ಲಿಸಲಾಗಿತ್ತು. ಆದರೆ ಎಲ್ಲ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ಹಸ್ತಾಂತರ ಮಾಡಬೇಕು ಎಂದು ಹೈಕೋರ್ಟ್‌ ನಿರ್ದೇಶನ ನೀಡಿರುವುದರಿಂದ ತನಿಖೆಗೆ ತೊಂದರೆ ಆಗಿದೆ’ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಸಾರ್ವಜನಿಕ ಸೇವೆಯಲ್ಲಿರುವ ಸರ್ಕಾರಿ ನೌಕರರ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣಗಳ ತನಿಖೆ ನಡೆಸಲು 2016ರಲ್ಲಿ ರಚಿಸಲಾಗಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು 2022ರ ಆಗಸ್ಟ್‌ 11ರಂದು (ಎಸಿಬಿ) ಹೈಕೋರ್ಟ್‌ ರದ್ದುಗೊಳಿಸಿತ್ತು, ಅಲ್ಲದೆ, ಎಸಿಬಿ ವ್ಯಾಪ್ತಿಯಲ್ಲಿ ಸದ್ಯ ತನಿಖೆಗೆ ಒಳಪಟ್ಟಿರುವ ಎಲ್ಲ ಪ್ರಕರಣಗಳನ್ನೂ ಲೋಕಾಯುಕ್ತಕ್ಕೆ ವರ್ಗಾಯಿಸಬೇಕು ಎಂದು ಮಹತ್ವದ ತೀರ್ಪು ನೀಡಿತ್ತು.

ಪ್ರಮುಖ ಸುದ್ದಿ :-   ಎಸ್‌ಐಆರ್‌ : ಕರ್ನಾಟಕದ ಅಂತಿಮ ಮತದಾರರ ಪಟ್ಟಿ ಪ್ರಕಟ ; 99 ಲಕ್ಷಕ್ಕೂ ಹೆಚ್ಚು ಹೆಸರು ಡಿಲೀಟ್

ರಾಜ್ಯ ಸರ್ಕಾರ 2016ರ ಮಾರ್ಚ್‌ 19ರಂದು ಎಸಿಬಿ ರಚನೆ ಮಾಡಿ ಹೊರಡಿಸಿದ್ದ ಅಧಿಸೂಚನೆಯನ್ನು ಪ್ರಶ್ನಿಸಿ ಸಮಾಜ ಪರಿವರ್ತನಾ ಸಮುದಾಯ, ಬೆಂಗಳೂರು ವಕೀಲರ ಸಂಘ ಮತ್ತು ವಕೀಲ ಬಿ.ಜಿ. ಚಿದಾನಂದ ಅರಸ ಸೇರಿದಂತೆ 15 ಜನರು ಸಲ್ಲಿಸಿದ್ದ ಪ್ರತ್ಯೇಕ ರಿಟ್‌ ಅರ್ಜಿಗಳ ವಿಚಾರಣೆ ನಡೆಸಿ ನ್ಯಾಯಮೂರ್ತಿ ಬಿ. ವೀರಪ್ಪ ಹಾಗೂ ನ್ಯಾಯಮೂರ್ತಿ ಕೆ.ಎಸ್‌. ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ ತೀರ್ಪನ್ನು ಪ್ರಕಟಿಸಿತ್ತು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement