ಬೆಂಗಳೂರು: ಕಳೆದ ಕೆಲ ದಿನಗಳಿಂದ ಸ್ಥಗಿತಗೊಂಡಿದ್ದ ಮಳೆ ಗುರುವಾರ(ಜುಲೈ 16)ದಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಮತ್ತೆ ಶುರುವಾಗಿದೆ.
ಈ ಹಿನ್ನೆಲೆಯಲ್ಲಿ (ಜುಲೈ 17 ಹಾಗೂ 18) ಕರಾವಳಿಯ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಜುಲೈ 21ರ ವರೆಗೂ ಮುಂದುವರಿಯುವ ಸಾಧ್ಯತೆಯಿದೆ.
ಜುಲೈ 18, ಶನಿವಾರ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಅಲ್ಲದೆ ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗುವ ಸೂಚನೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಕೊಡಗು ಹಾಗೂ ಹಾಸನ ಜಿಲ್ಲೆಗಳಿಗೆ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಗದಗ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಜುಲೈ 19ರಂದು ಕರಾವಳಿಯ ಮೂರೂ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಅಲ್ಲದೆ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಹಗುರ ಮಳೆಯ ಮುನ್ಸೂಚನೆ ಇದೆ.


ನಿಮ್ಮ ಕಾಮೆಂಟ್ ಬರೆಯಿರಿ