ಸಾಮೂಹಿಕ ವಿವಾಹದ ವೇಳೆ ವಧುಗಳಿಗೆ ಗರ್ಭಧಾರಣೆ ಪರೀಕ್ಷೆ ನಡೆಸಿದ ಆಡಳಿತ ; ಮಧ್ಯಪ್ರದೇಶದಲ್ಲಿ ಕೋಲಾಹಲ

ಭೋಪಾಲ: ಕೆಲವು ವಧುಗಳನ್ನು ಗರ್ಭಧಾರಣೆಯ ಪರೀಕ್ಷೆಗೆ ಒಳಪಡಿಸಿದ ನಂತರ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಆರ್ಥಿಕವಾಗಿ ದುರ್ಬಲ ವರ್ಗದ ಮಹಿಳೆಯರ ಸಾಮೂಹಿಕ ವಿವಾಹ ಯೋಜನೆ ವಿವಾದಕ್ಕೆ ಸಿಲುಕಿದ್ದು, ಕೋಲಾಹಲಕ್ಕೆ ಕಾರಣವಾಗಿದೆ. ಘಟನೆಯ ಬಗ್ಗೆ ತನಿಖೆಗೆ ಆಗ್ರಹಿಸಿರುವ ಕಾಂಗ್ರೆಸ್‌, ಸರ್ಕಾರ ಬಡವರನ್ನು ಅವಮಾನಿಸಿದೆ ಎಂದು ಕಿಡಿಕಾರಿದೆ.
ಮುಖ್ಯಮಂತ್ರಿ ಕನ್ಯಾ ವಿವಾಹ ಯೋಜನೆಯಡಿ ಮಧ್ಯಪ್ರದೇಶದ ದಿಂಡೋರಿಯ ಗಡ್ಸರಾಯ್‌ ಪ್ರದೇಶದಲ್ಲಿ ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ 219 ವಧುಗಳ ಗರ್ಭಧಾರಣೆ ಪರೀಕ್ಷೆ ನಡೆಸಲಾಗಿದ್ದು, ಐವರು ವಧುಗಳಿಗೆ ಪಾಸಿಟಿವ್‌ ಬಂದಿತ್ತು. ನಂತರ ಅಲ್ಲಿ ಅವರ ವಿವಾಹ ನಡೆಯಲಿಲ್ಲ ಇದು ಮಧ್ಯಪ್ರದೇಶದಲ್ಲಿ ಭಾರೀ ಕೋಲಾಹಲ ಸೃಷ್ಟಿಸಿದೆ. ಕಾಂಗ್ರೆಸ್‌ ಘಟನೆಯ ಬಗ್ಗೆ ತನಿಖೆಗೆ ಆಗ್ರಹಿಸಿದೆ. ಮಧ್ಯಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಕಮಲ್‌ನಾಥ್‌ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ್ದಾರೆ. ಕಾಂಗ್ರೆಸ್‌ ಶಾಸಕ ಓಂಕಾರ್‌ ಸಿಂಗ್‌ ಮಾರ್ಕಮ್‌ ಅವರು, ಈ ರೀತಿಯ ಪರೀಕ್ಷೆಗೆ ಮಾರ್ಗಸೂಚಿ, ನಿಯಮಗಳು ಏನಿವೆ ಎಂದು ಸರ್ಕಾರವು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಮಾಧ್ಯಮಗಳಲ್ಲಿ ಬಂದಿರುವ ವರದಿಗಳನ್ನು ಟ್ವೀಟ್‌ ಮಾಡಿರುವ ಕಮಲನಾಥ ಅವರು, ಈ ಸುದ್ದಿ ನಿಜವೇ ಎಂಬುದನ್ನು ನಾನು ಮುಖ್ಯಮಂತ್ರಿಗಳಿಂದ ತಿಳಿದುಕೊಳ್ಳಲು ಬಯಸುತ್ತೇನೆ. ಈ ಸುದ್ದಿ ನಿಜವಾಗಿದ್ದರೆ, ಯಾರ ಆದೇಶದ ಮೇರೆಗೆ ಮಧ್ಯಪ್ರದೇಶದ ಹೆಣ್ಣುಮಕ್ಕಳಿಗೆ ಇಂತಹ ಅವಮಾನ ಮಾಡಲಾಗಿದೆ? ಮುಖ್ಯಮಂತ್ರಿಗಳ ಕಣ್ಣುಗಳಲ್ಲಿ ಬಡ ಮತ್ತು ಬುಡಕಟ್ಟು ಸಮುದಾಯದ ಹೆಣ್ಣುಮಕ್ಕಳು ಮಾನ ಮರ್ಯಾದೆ ಇಲ್ಲದವರೇ ಎಂದು ಪ್ರಶ್ನಿಸಿರುವ ಅವರು, ಶಿವರಾಜ ಸಿಂಗ್ ಚೌಹಾಣ್ ನೇತೃತ್ವದ ಸರ್ಕಾರವು ಮಧ್ಯಪ್ರದೇಶದ ಮಹಿಳೆಯರೊಂದಿಗೆ ಅನುಚಿತ ವರ್ತಿಸುತ್ತಿದೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಕೇವಲ 23ನೇ ವಯಸ್ಸಿಗೆ 19 ಸರ್ಕಾರಿ ಪರೀಕ್ಷೆ ಪಾಸ್ ! ರಾಷ್ಟ್ರಪತಿಯಿಂದ 'ಅಟ್-ಹೋಮ್' ಗೌರವಕ್ಕೆ ಆಯ್ಕೆಯಾದ ಯುವತಿ

ಈ ಬಗ್ಗೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಗರ್ಭಧಾರಣೆಯ ಪರೀಕ್ಷೆ ನಡೆಸಲು ಯಾವುದೇ ನಿರ್ದೇಶನವನ್ನು ಜಿಲ್ಲಾಡಳಿತ ನೀಡಿಲ್ಲ. ಆದರೆ, ಕೆಲವು ವಧುಗಳು ಸ್ತ್ರೀರೋಗ ಸಮಸ್ಯೆಗಳ ಬಗ್ಗೆ ದೂರು ನೀಡಿದ್ದಕ್ಕಾಗಿ ಅಲ್ಲಿಯೇ ಸ್ಥಳದಲ್ಲಿದ್ದ ವೈದ್ಯರು ವಧುಗಳ ವೈದ್ಯಕೀಯ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ ಎಂದು ಹೇಳಿದ್ದಾರೆ.
ಸಾಮೂಹಿಕ ವಿವಾಹಗಳಲ್ಲಿ ಭಾಗವಹಿಸುವ ವಧುಗಳ ರಕ್ತಹೀನತೆ ಸಮಸ್ಯೆ ಪತ್ತೆಹಚ್ಚಲು ನಿರ್ದೇಶನಗಳನ್ನು ನೀಡಲಾಗಿತ್ತು ಎಂದು ಡಿಂಡೋರಿ ಜಿಲ್ಲಾಧಿಕಾರಿ ವಿಕಾಸ ಮಿಶ್ರಾ ಹೇಳಿದ್ದಾರೆ. ಈ ವೇಳೆ ವೈದ್ಯಕೀಯ ಪರೀಕ್ಷೆಯ ಸಮಯದಲ್ಲಿ ಕೆಲವು ವಧುಗಳು ಋತುಚಕ್ರದ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಈ ವೇಳೆ ಸಮಸ್ಯೆ ತಿಳಿಸಿದ ವಧುಗಳಿಗೆ ಗರ್ಭಧಾರಣೆಯ ಪರೀಕ್ಷೆ ನಡೆಸಲು ವೈದ್ಯರು ನಿರ್ಧಾರವನ್ನು ತೆಗೆದುಕೊಂಡರು ಎಂದು ಅವರು ತಿಳಿಸಿದ್ದಾರೆ.
ಗರ್ಭಧಾರಣೆ ಪರೀಕ್ಷೆ ನಡೆಸಲು ಆಡಳಿತದಿಂದ ಯಾವುದೇ ನಿರ್ದೇಶನ ಬಂದಿಲ್ಲ. ಗರ್ಭಿಣಿ ಎಂದು ಕಂಡುಬಂದ ನಾಲ್ವರು ಮಹಿಳೆಯರಿಗೆ ಸಾಮೂಹಿಕ ವಿವಾಹದಲ್ಲಿ ಭಾಗವಹಿಸಲು ಅವಕಾಶ ನೀಡಲಿಲ್ಲ ಎಂದು ಹೇಳಿದ್ದಾರೆ.
ನಂತರ ವೈದ್ಯರು ಐವರು ಬಾಲಕಿಯರ ಮೂತ್ರ ಪರೀಕ್ಷೆ ನಡೆಸಿದ್ದು, ಅವರು ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ನಂತರ ನಾವು ಅದರ ಬಗ್ಗೆ ವಿಚಾರಿಸಿದೆವು, ನಂತರ ಅವರು ಈಗಾಗಲೇ ಮದುವೆಯಾಗಿದ್ದಾರೆ ಎಂದು ಸಿಬ್ಬಂದಿಗೆ ತಿಳಿಸಿದರು ಎಂದು ಮಿಶ್ರಾ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಹ್ಯಾರಿಯರ್ ಕಾರು, ನಕಲಿ ಎನ್‌ಎಸ್‌ಜಿ ಕಮಾಂಡೋಗಳು ! ಸೇನೆಯ ಬ್ರಿಗೇಡಿಯರ್ ಸೋಗಿನಲ್ಲಿ ಓಡಾಡುತ್ತಿದ್ದ ಯುವಕ ಬಲೆಗೆ ಬಿದ್ದಿದ್ದೇ ರೋಚಕ

ದಿಂಡೋರಿ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ (ಸಿಎಂಎಚ್‌ಒ) ಡಾ ರಮೇಶ್ ಮರಾವಿ ಅವರು, ಕೆಲವು ಹುಡುಗಿಯರ ಗರ್ಭಧಾರಣೆಯ ಪರೀಕ್ಷೆಗಳನ್ನು ನಡೆಸಲಾಗಿದೆ ಎಂಬುದನ್ನು ಖಚಿತಪಡಿಸಿದ್ದಾರೆ. “ವಯಸ್ಸಿನ ಪರಿಶೀಲನೆ, ರಕ್ತಹೀನತೆ ಮತ್ತು ಒಟ್ಟಾರೆ ಫಿಟ್ನೆಸ್ ಅನ್ನು ಖಚಿತಪಡಿಸಿಕೊಳ್ಳಲು ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಶಂಕಿತ ಪ್ರಕರಣಗಳಿರುವ ಕೆಲವು ಹುಡುಗಿಯರಿಗೆ ಉನ್ನತ ಅಧಿಕಾರಿಗಳ ನಿರ್ದೇಶನದ ಮೇರೆಗೆ ಗರ್ಭಧಾರಣೆಯ ಪರೀಕ್ಷೆಗಳನ್ನು ನಡೆಸಲಾಯಿತು ಎಂದು ಹೇಳಿದ್ದಾರೆ.
ಗರ್ಭಧಾರಣೆಯ ಪರೀಕ್ಷೆಯು ಧನಾತ್ಮಕವಾಗಿ ಬಂದಿರುವ ಮಹಿಳೆಯೊಬ್ಬರು, ಮದುವೆಗೆ ಮುಂಚೆಯೇ ತನ್ನ ನಿಶ್ಚಿತ ವರನೊಂದಿಗೆ ವಾಸಿಸಲು ಪ್ರಾರಂಭಿಸಿರುವುದಾಗಿ ಹೇಳಿದ್ದಾಳೆ. ನನ್ನ ಗರ್ಭಧಾರಣೆಯ ಪರೀಕ್ಷೆಯು ಸಕಾರಾತ್ಮಕವಾಗಿದೆ. ಬಹುಶಃ ಈ ಕಾರಣದಿಂದಾಗಿ ನನ್ನ ಹೆಸರನ್ನು ಅಂತಿಮ ಪಟ್ಟಿಯಿಂದ ಕೈಬಿಡಲಾಗಿದೆ, ಆದರೂ ಅಧಿಕಾರಿಗಳು ನನಗೆ ಯಾವುದೇ ಸ್ಪಷ್ಟವಾದ ಕಾರಣ ನೀಡಿಲ್ಲ” ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಕನ್ಯಾ ವಿವಾಹ/ನಿಕಾಹ್ ಯೋಜನೆಯನ್ನು ಏಪ್ರಿಲ್ 2006 ರಲ್ಲಿ ಪ್ರಾರಂಭಿಸಲಾಯಿತು. ಈ ಯೋಜನೆಯಡಿಯಲ್ಲಿ, ರಾಜ್ಯ ಸರ್ಕಾರವು ಆರ್ಥಿಕವಾಗಿ ದುರ್ಬಲ ವರ್ಗದ ಮಹಿಳೆಯರ ವಿವಾಹಕ್ಕಾಗಿ ₹ 56,000 ಆರ್ಥಿಕ ನೆರವು ನೀಡುತ್ತದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement