ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ ; ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಜೂನ್‌ 27 ರ ವರೆಗೂ ಹಲವು ಜಿಲ್ಲೆಗಳಿಗೆ ಭಾರೀ ಮಳೆಯಾಗಲಿರುವ ಹಿನ್ನಲೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇಂದಿನಿಂದ ಆರಂಭವಾಗಿ ಜೂನ್ 27 ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದೆ, ಆರೆಂಜ್ ಅಲರ್ಟ್ ನೀಡಲಾಗಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ, ಚಾಮರಾಜನಗರ, ದಾವಣಗೆರೆ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ನೀಡಲಾಗಿದ್ದು, ಕ್ರಮೇಣ ಮಳೆ ಪ್ರಮಾಣ ಕಡಿಮೆ ಆಗಲಿದೆ. ಹೀಗಾಗಿ ಜೂನ್‌ 27 ರವರೆಗೂ ಸಾಧಾರಣ ಮಳೆಯಾಗುವ ಹಿನ್ನಲೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಜೂನ್‌ 25, 26, 27 ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿಮೀ ಭಾರೀ ಗಾಳಿಯೊಂದಿಗೆ ಭಾರೀ ಮಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ಮಂಡ್ಯ, ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಗಂಟೆಗೆ 40-50 ಕಿಮೀ ಗಾಳಿಯೊಂದಿಗೆ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿಯೂ ಜೋರಾದ ಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರಮುಖ ಸುದ್ದಿ :-   ನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement