ಸಾರಿಗೆ ನೌಕರರ ವೇತನ ಶೇಕಡಾ 15ರಷ್ಟು ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ರಾಜ್ಯದ ಸಾರಿಗೆ ಸಿಬ್ಬಂದಿಗೆ ಶೇ.15ರಷ್ಟು ವೇತನ ಹೆಚ್ಚಳಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಇಂದು, ಗುರುವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು.
ಈ ವೇಳೆ ಸಾರಿಗೆ ಸಿಬ್ಬಂದಿ ವೇತನ ಶೇ.15ರಷ್ಟು ಹೆಚ್ಚು ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಏಪ್ರಿಲ್ ತಿಂಗಳಿನಿಂದ ಪೂರ್ವಾನ್ವಯ ಆಗುವಂತೆ ಸಾರಿಗೆ ನೌಕರರಿಗೆ ಶೇ.15ರಷ್ಟು ವೇತನ ಹೆಚ್ಚಳವಾಗಲಿದೆ.
ಕಳೆದ ಮಾರ್ಚ್ ನಲ್ಲಿ ಈ ಹಿಂದಿನ ಬಿಜೆಪಿ ಸರ್ಕಾರ, ನಾಲ್ಕೂ ನಿಗಮಗಳ(ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ, ವಾಯುವ್ಯ ಕರ್ನಾಟಕ ಸಾರಿಗೆ) ಸಾರಿಗೆ ನೌಕರರ ವೇತನವನ್ನು ಶೇ.15ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕೋವಿಡ್ ಲಸಿಕೆಗಳಿಗೂ ಹೃದಯಾಘಾತದ ಸಾವುಗಳಿಗೂ ಯಾವುದೇ ಸಂಬಂಧವಿಲ್ಲ; ತಳ್ಳಿಹಾಕಿದ ಏಮ್ಸ್ ವೈದ್ಯರು

ನಿಮ್ಮ ಕಾಮೆಂಟ್ ಬರೆಯಿರಿ

advertisement