ಮಹಾರಾಷ್ಟ್ರದಲ್ಲಿ 1ರಿಂದ 8ನೇ ತರಗತಿ ಎಲ್ಲ ವಿದ್ಯಾರ್ಥಿಗಳೂ ಪರೀಕ್ಷೆಯಿಲ್ಲದೆ ಪಾಸ್‌..

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಸಾರ್ವಕಾಲಿಕ ಹೆಚ್ಚಳ ಕಂಡ ಹಿನ್ನೆಲೆಯಲ್ಲಿ 1ರಿಂದ 8ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೆ ಪಾಸ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.
ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸೆಕಂಡರಿ ಮತ್ತು ಪ್ರೌಢ ಶಿಕ್ಷಣ ಮಂಡಳಿ ಈ ನಿರ್ಧಾರ ಕೈಗೊಂಡಿದೆ.ಮುಂಬೈ ಸೇರಿದಂತೆ ಮಹಾರಾಷ್ಟ್ರ ರಾಜ್ಯದಲ್ಲಿ ಕೊವಿಡ್‌ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿವೆ. ಹೀಗೆ ಮುಂದುವರಿದರೆ ಲಾಕ್‌ಡೌನ್‌ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಶುಕ್ರವಾರ ಹೇಳಿದ್ದಾರೆ.
ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಅಂತಿಮ ವರ್ಷದ ಪರೀಕ್ಷೆ ಇಲ್ಲದೆ ಮುಂದಿನ ತರಗತಿಗೆ ವಿದ್ಯಾರ್ಥಿಗಳನ್ನು ಕಳುಹಿಸಲಾಗುತ್ತಿದೆ. ಮಹಾರಾಷ್ಟ್ರದಲ್ಲಿ ಶುಕ್ರವಾರ 47, 827 ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ರಾಜ್ಯಾದ್ಯಂತ ಒಟ್ಟಾರೇ ಸೋಂಕಿತರ ಸಂಖ್ಯೆ 29, 04,076ಕ್ಕೆ ತಲುಪಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಇಂದು ಕರ್ನಾಟಕದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ; ಯಲ್ಲೋ ಅಲರ್ಟ್‌

ನಿಮ್ಮ ಕಾಮೆಂಟ್ ಬರೆಯಿರಿ

advertisement