ನಟ ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಪ್ರಕರಣ; ₹1.5 ಲಕ್ಷ ದೋಚಿದ್ದ ಬಿಹಾರದ ಸೈಬರ್ ವಂಚಕನ ಬಂಧನ

ಬೆಂಗಳೂರು : ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಅವರ ಮೊಬೈಲ್ ಹ್ಯಾಕ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಿಹಾರ ಮೂಲದ ವಿಕಾಸಕುಮಾರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಬಂಧನಕ್ಕೆಂದು ಬಿಹಾರಕ್ಕೆ ಹೋದ ಬೆಂಗಳೂರಿನ ಸದಾಶಿವನಗರ ಪೊಲೀಸರು ಈ ಸೈಬರ್ ಖದೀಮರ ಜಾಲ ನೋಡಿ ಶಾಕ್ ಆಗಿದ್ದಾರೆ. ಆರೋಪಿ ವಿಕಾಸಕುಮಾರ ಮತ್ತು ಆತನ ಸಹಚರರು ದೊಡ್ಡ ಮಟ್ಟದ ಸೈಬರ್ ವಂಚನೆಯಲ್ಲಿ ಭಾಗಿಯಾಗಿದ್ದರು. ಅವನ ತಂಡದಲ್ಲಿ 20ರಿಂದ 25 ವರ್ಷದೊಳಗಿನ ಯುವಕರೇ ಇದ್ದರು ಎಂಬುದು ಕಂಡುಬಂದಿದೆ. ಸದ್ಯ ಆರೋಪಿ ವಿಕಾಸನನ್ನು ಪೊಲೀಸರು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಸೆ.15ರಂದು ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಆಗಿತ್ತು. ಆನ್‌ಲೈನ್‌ನಲ್ಲಿ ಕೆಲ ವಸ್ತುಗಳನ್ನು ಪ್ರಿಯಾಂಕಾ ಉಪೇಂದ್ರ ಬುಕ್ ಮಾಡಿದ್ದರು. ಈ ವೇಳೆ ಮೊಬೈಲ್‌ಗೆ ಲಿಂಕ್ ಬಂದಿದ್ದು, ಆ ಲಿಂಕ್ ಅನ್ನು ಪ್ರಿಯಾಂಕ ಕ್ಲಿಕ್ ಮಾಡಿದ್ದರು. ಬಳಿಕ ನಟಿ ಪ್ರಿಯಾಂಕಾ ವಾಟ್ಸಾಪ್ ಹ್ಯಾಕ್ ಮಾಡಿದ್ದ ಖದೀಮ, ಅವರ ಸಂಪರ್ಕದಲ್ಲಿದ್ದವರಿಗೆ 55,000 ಹಣ ಕಳುಹಿಸುವಂತೆ ಮೆಸೇಜ್ ಮಾಡಿದ್ದ. ಪ್ರಿಯಾಂಕಾ ಅವರೇ ಸಂದೇಶ ಕಳುಹಿಸಿದ್ದಾರೆಂದು ನಂಬಿದ ಹಲವರು ಹಣವನ್ನು ಹಾಕಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ನಿಂದ ನಾಲ್ವರಿಗೆ ಟಿಕೆಟ್‌ ಘೋಷಣೆ

ಈ ವೇಳೆ ಆರೋಪಿ ಯಾರೆಂದು ತಿಳಿಯಲು ಯತ್ನಿಸಿದ್ದ ಪ್ರಿಯಾಂಕಾ, ಪತಿ ಉಪೇಂದ್ರ ಹಾಗೂ ಮ್ಯಾನೇಜರ್ ನಂಬರ್‌ನಿಂದ ಕರೆ ಮಾಡಿದ್ದರು. ಬಳಿಕ ಮ್ಯಾನೇಜರ್ ಹಾಗೂ ಉಪೇಂದ್ರ ಮೊಬೈಲ್ ಕೂಡ ಹ್ಯಾಕ್ ಆಗಿತ್ತು. ವಿಷಯ ಅರಿವಿಗೆ ಬರುತ್ತಿದ್ದಂತೆ ಪ್ರಿಯಾಂಕಾ ಅವರು ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ, ಅಷ್ಟರಲ್ಲಾಗಲೇ ವಂಚಕನ ಖಾತೆಗೆ ಸುಮಾರು ಒಂದೂವರೆ ಲಕ್ಷ ರೂಪಾಯಿ ಹಣ ವರ್ಗಾವಣೆಯಾಗಿತ್ತು. ದೂರು ದಾಖಲಾಗುತ್ತಿದ್ದಂತೆ ಕಾರ್ಯಾಚರಣೆಗಿಳಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿ ಬಿಹಾರದ ದಶರಥಪುರದ ನಿವಾಸಿ ಎಂದು ಪತ್ತೆಹಚ್ಚಿದರು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement