ಉಡುಪಿ: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ರಾಕೇಶ ಪೂಜಾರಿ ( 33) ಅವರು ಸೋಮವಾರ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಪರಿಚಯಸ್ಥರ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದಾಗ ಅವರಿಗೆ ಹೃದಯಾಘಾತವಾಗಿದ್ದು, ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ಇಂದು, ಸೋಮವಾರ (ಮೇ 12) ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಇದ್ದಕ್ಕಿದ್ದಂತೆ ಲೋ ಬಿಪಿಯಿಂದ ಕುಸಿದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತದರೂ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಾಮಿಡಿ ಕಿಲಾಡಿಗಳು 3ನೇ ಆವೃತ್ತಿಯಲ್ಲಿ ಅವರು ಭಾಗಿಯಾಗಿ ವಿಜೇತರಾಗಿದ್ದರು.
ರಾಕೇಶ್ ಅವರ ಸಾವು ಅವರ ಅಭಿಮಾನಿಗಳು ಹಾಗೂ ಆಪ್ತ ಬಳಗಕ್ಕೆ ಶಾಕ್ ನೀಡಿದ್ದು, ಸಾವಿಗೆ ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ.
ರಾಕೇಶ ಅವರು 2018 ರಲ್ಲಿ ಜೀ ಕನ್ನಡ ‘ಕಾಮಿಡಿ ಕಿಲಾಡಿಗಳು ಸೀಸನ್ 2’ಕ್ಕೆ ಆಯ್ಕೆಯಾಗಿದ್ದರು. ಆ ವರ್ಷದ ರನ್ನರ್ ಅಪ್ ತಂಡದಲ್ಲಿ ಇದ್ದರು. ನಂತರ 2020ರಲ್ಲಿ ಕಾಮಿಡಿ ಕಿಲಾಡಿಗಳು ಸೀಸನ್ 3ರ ವಿಜೇತರಾದರು.
ಕನ್ನಡದ ‘ಪೈಲ್ವಾನ್’, ‘ಇದು ಎಂಥಾ ಲೋಕವಯ್ಯ’ ಚಿತ್ರಗಳಲ್ಲಿಯೂ ನಟಿಸಿದ್ದಾರೆ. ತುಳು ಭಾಷೆಯ ‘ಪೆಟ್ಕಮ್ಮಿ’, ‘ಅಮ್ಮೆರ್ ಪೊಲೀಸ್’ ಮೊದಲಾದ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಅವರು ತಮ್ಮ ನಟನಾ ಪಯಣವನ್ನು ಚೈತನ್ಯ ಕಲಾವಿದರು ನಾಟಕ ತಂಡದ ಮೂಲಕ. ಬಳಿಕ 2014ರಲ್ಲಿ ಖಾಸಗಿ ಚಾನೆಲ್ ನಲ್ಲಿ ‘ಕಡ್ಲೆ ಬಜಿಲ್’ ಎಂಬ ತುಳು ರಿಯಾಲಿಟಿ ಶೋ ಮೂಲಕ ಜನರ ಮನ ಗೆದ್ದಿದ್ದರು. ನಂತರ ಹಲವು ಸಿನಿಮಾಗಳಿಗೆ ಆಡಿಷನ್ ನೀಡಿದ್ದರು ಹಾಗೂ ನಟಿಸಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ