ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ : ತಾಯಿ-ಮಗು ಸಾವು

ಮುಂಬೈ: ಸರ್ಕಾರಿ ಆಸ್ಪತ್ರೆಯೊಂದರಲ್ಲಿ ವಿದ್ಯುತ್‌ ಕೈಕೊಟ್ಟ ನಂತರ ವೈದ್ಯರು ಮೊಬೈಲ್‌ ಟಾರ್ಚ್‌ ಲೈಟ್‌ ಬಳಸಿ ಗರ್ಭಿಣಿಗೆ ಹೆರಿಗೆ ಮಾಡಲು ಮುಂದಾದಾದ ನಂತರ ತಾಯಿ ಹಾಗೂ ಮಗು ಮೃತಪಟ್ಟ ಘಟನೆ ಮುಂಬೈ ಮಹಾನಗರ ಪಾಲಿಕೆ ನಡೆಸುತ್ತಿರುವ ಸುಷ್ಮಾ ಸ್ವರಾಜ್ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ.
ಮೃತ ಮಹಿಳೆಯ ಪತಿ ಖುಸ್ರುದ್ದೀನ್ ಅನ್ಸಾರಿ ಸ್ವತಃ ಅಂಗವಿಕಲರಾಗಿದ್ದಾರೆ, ಅವರ 26 ವರ್ಷದ ಪತ್ನಿ ಶಾಹಿದುನ್ ಎಂಬವರು ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು, ಈ ವೇಳೆ ವೈದ್ಯರು ಸಾಮಾನ್ಯ ಹೆರಿಗೆ ಮಾಡಿಸುವ ಭರವಸೆ ನೀಡಿದ್ದರು ಆದರೆ ಸೋಮವಾರ ಶಾಹಿದುನ್ ಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು ಈ ವೇಳೆ ಸಾಮಾನ್ಯ ಹೆರಿಗೆ ಕಷ್ಟ ಎಂದ ವೈದ್ಯರು ಆಪರೇಷನ್ ಮೂಲಕ ಹೆರಿಗೆ ಮಾಡಲು ಮುಂದಾಗಿದ್ದಾರೆ.

ದುರದೃಷ್ಟವಶಾತ್ ಈ ವೇಳೆ ಆಸ್ಪತ್ರೆಯಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿತ್ತು. ಆಸ್ಪತ್ರೆಯಲ್ಲಿದ್ದ ಜನರೇಟರ್‌ ಕೂಡ ಕಾರ್ಯನಿರ್ವಹಿಸಲಿಲ್ಲ ಎಂದು ಹೇಳಲಾಗಿದೆ. ನಂತರ ವೈದ್ಯರು ಮೊಬೈಲ್ ಟಾರ್ಚ್ ಬೆಳಕಲ್ಲಿ ಹೆರಿಗೆ ಮಾಡಲು ಮುಂದಾಗಿದ್ದು, ಈ ವೇಳೆ ತಾಯಿ ಮತ್ತು ಹೊಟ್ಟೆಯಲ್ಲಿದ್ದ ಮಗು ಇಬ್ಬರೂ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಲಾಗಿದೆ.
ವಿಚಾರ ಬೆಳಕಿಗೆ ಬರುತ್ತಿದ್ದಂತೆ ಕುಟುಂಬ ಸದಸ್ಯರು ಆಸ್ಪತ್ರೆಯ ನಿರ್ಲಕ್ಷದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ತುರ್ತು ಸೇವಾ ಘಟಕದಲ್ಲಿ ಆಮ್ಲಜನಕದ ಕೊರತೆ ಇತ್ತು ಇದರಿಂದಲೇ ಪತ್ನಿ ಮೃತಪಟ್ಟಿದ್ದಾರೆ ಎಂದು ಪತಿ ಆರೋಪಿಸಿದ್ದಾರೆ.
ಮಹಾನಗರ ಪಾಲಿಕೆ ತನಿಖೆ ನಡೆಸಲಿದ್ದು, ಪೂರ್ಣ ತನಿಖೆಯ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಸಿದ್ದಾಪುರ : ಸಿಡಿಲು ಬಡಿದು 7 ಹಸುಗಳು ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement