ಕುಮಟಾ : ಲಾರಿ-ಬೈಕ್‌ ಡಿಕ್ಕಿ; ಓರ್ವ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

ಕುಮಟಾ: ಬೈಕ್‌ ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಗಿಬ್ ಸರ್ಕಲ್ ಬಳಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ.
ಮೃತ ವ್ಯಕ್ತಿಯನ್ನು ಬೈಕ್‌ ಸವಾರ ಸುಬ್ರಹ್ಮಣ್ಯ ಅಂಬಿಗ (35) ಎಂದು ಗುರುತಿಸಲಾಗಿದೆ. ಸಹ ಸವಾರ ಭಗೀರಥ ಅಂಬಿಗ (25) ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಬ್ಬರೂ ಹೆಗಡೆ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಮೀನುಗಾರಿಕಾ ಬಲೆ ಖರೀದಿಗಾಗಿ ಇಬ್ಬರೂ ಸೇರಿ ಬೈಕ್‌ನಲ್ಲಿ ಮಲ್ಪೆಗೆ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

5 / 5. 3

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಜನಿಸಿದ ಮಗು ಮಾರಾಟ ಆರೋಪ, ಆಕೆ ಮತ್ತೆ ಗರ್ಭಿಣಿ

ನಿಮ್ಮ ಕಾಮೆಂಟ್ ಬರೆಯಿರಿ

advertisement