ಖಾನಾಪುರ : ಮರಕ್ಕೆ ಕಾರು ಡಿಕ್ಕಿ ; ಸ್ಥಳದಲ್ಲೇ ಆರು ಮಂದಿ ಸಾವು

ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಸಮೀಪ  ಬೀಡಿ-ಮಂಗ್ಯಾನಕೊಪ್ಪ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ ಎಂದು ವರದಿಯಾಗಿದೆ.  ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಕಾರು ಚಾಲಕ ಶಾರುಖ್ ಪೆಂಡಾರಿ (30), ಇಕ್ಬಾಲ್ ಜಮಾದಾರ್ (50), ಸಾನಿಯಾ ಲಂಗೋಟಿ (37), ಶಬನಮ್ ಲಂಗೋಟಿ ( 37), ಉಮರ್ ಲಂಗೋಟಿ (12), ಫರಾನ್ ಲಂಗೋಟಿ (13) ಎಂದು ಗುರುತಿಸಲಾಗಿದೆ.
ಮದುವೆ ಮುಗಿಸಿ ವಾಪಸ್‌ ಮರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಸ್ವಿಫ್ಟ್ ಕಾರಿನಲ್ಲಿ ಸುಮಾರು 10 ಮಂದಿ ಪ್ರಯಾಣಿಸುತ್ತಿದ್ದು, ಇವರು ಧಾರವಾಡ ಮೂಲದವರು ಎಂದು ಹೇಳಲಾಗಿದೆ. ನಾಲ್ವರು ಗಾಯಾಳುಗಳನ್ನು ಸ್ಥಳೀಯ ಹಾಗೂ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಛಿದ್ರಗೊಂಡಿದೆ.

ಪ್ರಮುಖ ಸುದ್ದಿ :-   ವಾಯುಭಾರ ಕುಸಿತ : ಕರ್ನಾಟಕದಲ್ಲಿ ಮೇ 24ರ ವರೆಗೆ ಭಾರಿ ಮಳೆ ಮುನ್ನೆಚ್ಚರಿಕೆ ; 15 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement