ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ 158.81 ಕೋಟಿ ರೂ.ಗಳ ವೆಚ್ಚದಲ್ಲಿ ಸುರಕ್ಷತಾ ಕಾಮಗಾರಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ 158.81 ಕೋಟಿ ರೂ.ಗಳ ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿಗಳನ್ನು ಕೈಗೊಳ್ಳಲಿದ್ದು, ನವೆಂಬರ್ ನಂತರ ಕೆಲಸ ಆರಂಭವಾಗಲಿದೆ ಎಂದರು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶನಿವಾರ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಕ್ಸ್ ಪ್ರೆಸ್ ವೇ ನಲ್ಲಿ ಕೆಲವು ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕಿದ್ದು ಅದಕ್ಕಾಗಿಯೇ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಬೆಂಗಳೂರು, ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸ್ಪೀಡ್ ಡಿಟೆಕ್ಟರ್ ಗಳನ್ನು ಅಳವಡಿಸಿರಲಿಲ್ಲ. ಆ ಕಾರಣಕ್ಕೆ ಅಪಘಾತಗಳು ಹೆಚ್ಚಾಗಿದ್ದವು. ಜುಲೈ ತಿಂಗಳಲ್ಲಿ ಅಪಘಾತಗಳು ಕಡಿಮೆಯಾಗಿವೆ. ಸ್ಪೀಡ್ ಡಿಟೆಕ್ಟರ್ ಗಳನ್ನು 10 ಕಿಮೀ ಅಂತರದಲ್ಲಿ ಅಳವಡಿಸಿದರೆ ಅಪಘಾತಗಳನ್ನು ಕಡಿಮೆ ಮಾಡಲು ಸಾಧ್ಯ. ಈ ಬಗ್ಗೆ ನನ್ನ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದರು.
ಸರ್ವಿಸ್ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ. ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು,ಮಂಡ್ಯ, ಶ್ರೀರಂಗಪಟ್ಟಣ, ಬೈಪಾಸ್ ರಸ್ತೆಗಳಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಪ್ರವೇಶ ಮತ್ತು ನಿರ್ಗಮನ ರಸ್ತೆಗಳನ್ನು ಮಾರ್ಚ್ ತಿಂಗಳೊಳಗೆ ಪೂರ್ಣ ಗೊಳಿಸಲು ಸೂಚನೆ ನೀಡಲಾಗಿದೆ ಎಂದರು.
ಹೆದ್ದಾರಿ ಪೂರ್ಣಗೊಳ್ಳದೆ ಟೋಲ್ ಸಂಗ್ರಹವಾಗುತ್ತಿರುವ ಬಗ್ಗೆ ಮಾತನಾಡಿ ದೆಹಲಿಗೆ ತೆರಳಿದಾಗ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಈ ಬಗ್ಗೆ ಮಾತನಾಡುವುದಾಗಿ ಭರವಸೆ ನೀಡಿದರು.

ಪ್ರಮುಖ ಸುದ್ದಿ :-   ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ; ಸಿಎಂ ಡಿಕೆ ಶಿವಕುಮಾರ ಘೋಷಣೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement