ಗೆಸ್ಟ್​ಹೌಸ್ ಅತಿಕ್ರಮ ಪ್ರವೇಶದ ಆರೋಪ: ಎಚ್‌ಡಿಕೆ ವಿರುದ್ಧ ಜಮೀರ್ ಅಹ್ಮದ್ ದೂರು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ದೂರು ನೀಡಿದ್ದಾರೆ.
ಆಪ್ತ ಸಹಾಯಕ ಫಾರೂಕ್ ಮೂಲಕ ಬೆಂಗಳೂರಿನ ಸದಾಶಿವ ನಗರ ಪೊಲೀಸ್​ ಠಾಣೆಗೆ ದೂರು ಸಲ್ಲಿಸಿದ್ದಾರೆ. ಸದಾಶಿವ ನಗರದ ಗೆಸ್ಟ್​​ಹೌಸ್ ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ.
ಸದಾಶಿವ ನಗರದ ಗೆಸ್ಟ್​​ಹೌಸ್​​ಗೆ ಗನ್​ಮ್ಯಾನ್​ಗಳು ಪ್ರವೇಶ ಮಾಡಿದ್ದಾರೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಗನ್​ಮ್ಯಾನ್​ಗಳು ಬೀಗ ಮುರಿದು ಒಳನುಗ್ಗಿದ್ದಾರೆ. ಗೆಸ್ಟ್​ಹೌಸ್ ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂಬ ಕಾರಣಕ್ಕೆ ದೂರು ನೀಡಲಾಗಿದೆ.
ಸದಾಶಿವನಗರದ ಗೆಸ್ಟ್​ಹೌಸ್ ತೆರವು ಮಾಡಿದ್ದರು. ಕುಮಾರಸ್ವಾಮಿಗೆ ಸೇರಿದ ಅಗತ್ಯ ವಸ್ತುಗಳು ಅಲ್ಲಿದ್ದವು. ಗೆಸ್ಟ್​​ಹೌಸ್ ಕೀಲಿ ಶಾಸಕ ಜಮೀರ್ ಅಹ್ಮದ್​ ಬಳಿಯಿತ್ತು. ಜಮೀರ್​ಗೆ ಭೋಜೇಗೌಡ ಕರೆ ಮಾಡಿ ಎರಡು ದಿನ ಕಾಲಾವಕಾಶ ಕೇಳಿದ್ದರು ಎನ್ನಲಾಗಿದೆ.
ಈ ನಡುವೆ ಕುಮಅರಸ್ವಮಿ ಹಾಗೂ ಜಮೀರ್‌ ಅಹಮ್ಮದ್‌ ಮಧ್ಯೆ ತಿಕ್ಕಾಟ ಜೋರಾಗಿದೆ. ಹೀಗಾಗಿ ನಿಖಿಲ್ ಕುಮಾರಸ್ವಾಮಿ ಗನ್ ಮ್ಯಾನ್ ಬೀಗ ಮುರಿದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಮೊದಲ ಬಾರಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಜಮೀರ್ ಬಹಳ ಆಪ್ತರಾಗಿದ್ದರು ಆಗ ಈ ಗೆಸ್ಟ್‌ ಹೌಸನ್ನು ಕುಮಾರಸ್ವಾಮಿಯವರಿಗೆ ಬಿಟ್ಟುಕೊಟ್ಟಿದ್ದರು. ಆದರೆ ಕುಮಾರಸ್ವಾಮಿ ಮತ್ತು ಜಮೀರ್ ಅವರ ನಡುವೆ ಬಿರುಕು ಬಿಟ್ಟು ಈಗ ಅದು ಇಲ್ಲಿವರೆಗೆ ಬಂದು ನಿಂತಿದೆ.

ಪ್ರಮುಖ ಸುದ್ದಿ :-   ವಿಧಾನಸೌಧ ಸ್ಫೋಟದ ಎಐ ವಿಡಿಯೊ ಸೃಷ್ಟಿಸಿ ಹಂಚಿಕೊಂಡ ಆರೋಪ : ಕಿಡಿಗೇಡಿ ಬಂಧನ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement