ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಹಿಡನ್‌ ಕ್ಯಾಮರಾ ಇರಲಿಲ್ಲ, ಆರೋಪಗಳ ಆಧಾರದ ಮೇಲೆ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ-ಖುಷ್ಬೂ

ಉಡುಪಿ : ಕಾಲೇಜಿನ ಶೌಚಾಲಯದಲ್ಲಿ ವೀಡಿಯೊ ಮಾಡಿರುವ ಬಗ್ಗೆ ಈಗಷ್ಟೇ ತನಿಖೆ ಆರಂಭ ಮಾಡಿದ್ದು, ಟಾಯ್ಲೆಟ್‌ನಲ್ಲಿ ಯಾವುದೇ ಹಿಡನ್‌ ಕ್ಯಾಮರಾ ಇರಲಿಲ್ಲ. ಸಂಬಂಧಪಟ್ಟ ಫೋನ್ ಗಳನ್ನು ವಿಧಿ ವಿಜ್ಞಾನ ಪ್ರಯೋಗಕ್ಕೆ ಕಳುಹಿಸಲಾಗಿದೆ. ಈ ವಿಚಾರದಲ್ಲಿ ವದಂತಿಗಳಿಗೆ, ವಾಟ್ಸಪ್ ಮೆಸೇಜ್ ಗಳಿಗೆ ಗಮನ ಕೊಡಬೇಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ ಹೇಳಿದ್ದಾರೆ.
ಕಾಲೇಜಿಗೆ ಭೇಟಿ ನೀಡಿ ಕಾಲೇಜು ಆಡಳಿತ ಮಂಡಳಿ, ಸಂತ್ರಸ್ತೆ ಮತ್ತು ಆರೋಪಿತ ವಿದ್ಯಾರ್ಥಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಇದೆಲ್ಲ ಸೂಕ್ಷ್ಮ ವಿಚಾರ ಆಗಿರುವುದರಿಂದ ಹಾಗೂ ಘಟನೆ ತನಿಖಾ ಹಂತದಲ್ಲಿರುವುದರಿಂದ ಏನು ಚರ್ಚೆ ಆಯ್ತು ಎಂದು ಬಹಿರಂಗಪಡಿಸಲು ಸಾಧ್ಯವಿಲ್ಲ. ಎಂದರು.

ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮೆರಾ ಇರಿಸಲಾಗಿದೆ ಎನ್ನುವ ವದಂತಿ ನಂಬಬೇಡಿ. ಇದೊಂದು ಶೈಕ್ಷಣಿಕ ಕೇಂದ್ರ. ಇಲ್ಲಿ ಹಿಡನ್ ಕ್ಯಾಮೆರಾ ಇರಲು ಸಾಧ್ಯವಿಲ್ಲ. ಪೊಲೀಸರ ಜೊತೆಗೆ ನಾವು ಮಾಹಿತಿ ಸಂಗ್ರಹ ಮಾಡುತ್ತಿದ್ದೇವೆ. ಸಂಬಂಧಪಟ್ಟ ಫೋನ್ ಗಳನ್ನು ವಿಧಿ ವಿಜ್ಞಾನ ಪ್ರಯೋಗಕ್ಕೆ ಕಳುಹಿಸಲಾಗಿದೆ, ಇದಕ್ಕಿಂತ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ. ಪೊಲೀಸರ ಸಹಕಾರದೊಂದಿಗೆ ನಮ್ಮ ತನಿಖೆ ಮುಂದುವರಿಯಲಿದೆ ಎಂದು ತಿಳಿಸಿದರು.
ಈಗಷ್ಟೇ ತನಿಖೆ ಆರಂಭವಾಗಿರುವುದರಿಂದ ಈಗಲೇ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ. ಹೀಗಾಗಿ ಪೊಲೀಸರ ಹೇಳಿಕೆ ಹೊರತಾಗಿ ಸದ್ಯ ಜನರು ಯಾವುದೇ ಊಹಾಪೋಹಗಳಿಗೆ ಕಿವಿ ಕೊಡಬೇಡಿ ಎಂದು ಮನವಿ ಮಾಡುತ್ತೇನೆ. ಮಾಹಿತಿ ಸಂಗ್ರಹಕ್ಕೆ ಸ್ವಲ್ಪ ಸಮಯಬೇಕು. ಆರೋಪಗಳು ಅನೇಕ ಇರಬಹುದು, ಅದರ ಆಧಾರದಲ್ಲಿ ಯಾವುದೇ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ಇದು ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಸಂಬಂಧಿಸಿದ ವಿಚಾರ. ಇದು ಎರಡು ನಿಮಿಷದ ನೂಡಲ್ಸ್ ತರಹ ಅಲ್ಲ ಎಂದರು.ತನಿಖೆ ಪೂರ್ಣಗೊಂಡ ನಂತರ ನಾವೇ ಸರಿಯಾದ ಮಾಹಿತಿ ನೀಡುತ್ತೇವೆ ಎಂದರು.

ಪ್ರಮುಖ ಸುದ್ದಿ :-   ಕುಮಟಾ: 'ಸೌರಭ'ಕ್ಕೆ ರಜತ ಸಂಭ್ರಮ, ಮೇ 12ರಂದು ಬೆಳಿಗ್ಗೆಯಿಂದ ರಾತ್ರಿ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement