ಸಂತೋಷ್ ಯಾರೆಂದೇ ನನಗೆ ಗೊತ್ತಿಲ್ಲ; ನಾನು ರಾಜೀನಾಮೆ ನೀಡಲ್ಲ: ಸಚಿವ ಈಶ್ವರಪ್ಪ

ಸಂತೋಷ್‌ ಆತ್ಮಹತ್ಯೆಯಲ್ಲಿ ನನ್ನ ಪಾತ್ರ ಇಲ್ಲ! ಆತ ಯಾರೆಂಬುದೇ ನನಗೆ ಗೊತ್ತಿಲ್ಲ: ಕೆಎಸ್‌ ಈಶ್ವರಪ್ಪ
ಮೈಸೂರು: ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ. ಆತ ಯಾರೆಂಬುದೇ ನನಗೆ ಗೊತ್ತಿಲ್ಲ ಎಂದು ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇದರಲ್ಲಿ ನನ್ನ ಪಾತ್ರ ಏನೂ ಇಲ್ಲ. ಹೀಗಾಗಿ, ನಾನು ರಾಜೀನಾಮೆ ನೀಡುವುದಿಲ್ಲ’ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಆತ ನಮ್ಮ ಇಲಾಖೆ ಮೇಲೆ ಆರೋಪ ಮಾಡಿದ್ದ. ಈ ವಿಚಾರವಾಗಿ ನಾವು ನ್ಯಾಯಾಲಯದಲ್ಲಿ ಸಂತೋಷ ಪಾಟೀಲ ವಿರುದ್ಧ ನ್ಯಾಯಾಲಯದಲ್ಲಿ ಮಾನನಷ್ಟ ಪ್ರಕರಣ ದಾಖಲು ಮಾಡಿದ್ದೇನೆ. ಸಂತೋಷ ಮೇಲೆ ಮತ್ತು ಒಂದು ಖಾಸಗಿ ಚಾನಲ್ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ನ್ಯಾಯಾಲಯದಿಂದ ಆತನಿಗೆ ನೋಟಿಸ್ ಬಂದಿದೆ. ಹೀಗಾಗಿ ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು. ಆತ ನಮ್ಮ ಇಲಾಖೆಯಿಂದ ಯಾವುದೇ ಟೆಂಡರ್ ಪಡೆದುಕೊಂಡಿಲ್ಲ. ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

ಬೆಳಗಾವಿ ಹಿಂಡಲಗಾ ಗ್ರಾಮದ ಗುತ್ತಿಗೆದಾರ ಹಾಗೂ ಬಿಜೆಪಿ ಕಾರ್ಯಕರ್ತ ಸಂತೋಷ ಪಾಟೀಲ ಅವರು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಈಚೆಗೆ ಶೇ 40ರಷ್ಟು ಪರ್ಸೆಂಟೇಜ್ ಆರೋಪ ಮಾಡಿದ್ದರು. ಸಂತೋಷ್ ಪಾಟೀಲ‌ ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈಗ ಭಾರೀ ಚರ್ಚೆಗೆ ಕಾರಣವಾಗಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement